ಹಟ್ಟಿಯಂಗಡಿ ಕ್ಷೇತ್ರದಲ್ಲಿ ದೇವರ ಸೇವೆಯೊಂದಿಗೆ ಜನಕಲ್ಯಾಣ ಕಾರ್ಯ: ತಿಮ್ಮಪ್ಪ ಹೆಗಡೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಾಮಾಣಿಕತೆ, ಶುದ್ಧ ಮನಸ್ಸಿನ ಜೊತೆಗೆ ಪರಿಶ್ರಮದ ಹಾದಿ ನಮ್ಮದಾದಾಗ ಸಾಧನೆಯ ಶಿಖರವನ್ನೇರಬಹುದು. ನಮಗೆ ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ದೇವರ ಸೇವೆಯ ಜೊತೆಗೆ ಜನಕಲ್ಯಾಣ ಕಾರ್ಯಗಳನ್ನು ಮಾಡಬಹುದೆಂಬುದನ್ನು ಹಟ್ಟಿಯಂಗಡಿ ಕ್ಷೇತ್ರ ತೋರಿಸಿಕೊಟ್ಟು ರಾಜ್ಯಾದ್ಯಂತ ಭಕ್ತರನ್ನು ಹೊಂದಿದೆ. ಕ್ಷೇತ್ರ ಇನ್ನಷ್ಟು ಪ್ರಗತಿದಾಯಕವಾಗಲಿ ಎಂದು ಸಾಗರದ ಮಾಜಿ ಶಾಸಕ ಎಲ್. ಟಿ. ತಿಮ್ಮಪ್ಪ ಹೆಗಡೆ ಹೇಳಿದರು.

Call us

Call us

Click Here

Visit Now

ಅವರು ಸಂಜೆ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಮಹೋತ್ಸವವದ ಅಂಗವಾಗಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು

Click here

Click Here

Call us

Call us

ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷ ಅನಂತ ಪದ್ಮನಾಭ ಐತಾಳ್ ಮಾತನಾಡಿ ದೇವರ ಮೇಲೆ ಭಯ ಮತ್ತು ಭಕ್ತಿ ಇದ್ದಲ್ಲಿ ಶ್ರದ್ಧೆ ಮೂಡುತ್ತದೆ. ಅದು ನಮ್ಮನ್ನು ಉನ್ನತಿಯೆಡೆಗೆ ಕೊಂಡೊಯ್ಯುತ್ತದೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ದೇವ ಎಜ್ಯುಕೇಶನಲ್ ಎಂಡ್ ಕಲ್ಚರಲ್ ಟ್ರಸ್ಟ್(ರಿ.) ಕಾರ್ಯದರ್ಶಿ ಭಂಡಾರಿ ರಾಧಾಕೃಷ್ಣ ಶೆಣೈ, ಯಕ್ಷಗಾನ ಕಲಾವಿದ ಹೆಮ್ಮಾಡಿ ರಾಮ, ಹಟ್ಟಿಯಂಗಡಿ ದೇವಳದ ಮೆನೇಜರ್ ಪ್ರಸಾದ್ ಭಟ್ ದಂಪತಿಗಳನ್ನು ಸನ್ಮಾನಿಸಲಾಯಿತು. ಅರ್ಹ ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಯಿತು. ಉದ್ಯಮಿ ಅರುಣ ಕುಮಾರ ಬೆಂಗಳೂರು ಶಾಲಾ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಪತ್ರಕರ್ತ ಸಂತೋಷ ಕೋಣಿ ಉಪಸ್ಥಿತರಿದ್ದರು. ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್ ಪ್ರಸ್ತಾವಿಕ ಮಾತುಗಳನ್ನಾಡಿದರು. ದೇವಳದ ಪ್ರದಾನ ಅರ್ಚಕ ಹೆಚ್. ಬಾಲಚಂದ್ರ ಭಟ್ ಸ್ವಾಗತಿಸಿದರು. ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಪ್ರಾಂಶುಪಾಲರಾದ ಶರಣ್‌ಕುಮಾರ ಫಲಾನುಭವಿಗಳ ಪಟ್ಟಿ ವಾಚಿಸಿದರು. ಉಪಪ್ರಾಂಶುಪಾಲರಾದ ರಾಮ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಗುರುರಾಜ್, ಜಯಂತ್ ಶ್ಯಾನುಭಾಗ್ ಸನ್ಮಾನಿತರ ಪರಿಚಯ ಮಾಡಿದರು. ಉಪನ್ಯಾಸಕ ಪ್ರಶಾಂತ ಹೆಗ್ಡೆ ವಂದಿಸಿದರು.

Leave a Reply

Your email address will not be published. Required fields are marked *

19 + 1 =