ಹತ್ತನೆ ತರಗತಿ ಫಲಿತಾಂಶ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಸತತ ಶೇ. ನೂರು ಫಲಿತಾಂಶ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿಯ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ೨೦೧೬-೧೭ನೇ ಶೈಕ್ಷಣಿಕ ವರ್ಷದಲ್ಲೂ ನೂರಕ್ಕೆ ನೂರು ಫಲಿತಾಂಶವನ್ನು ಪಡೆಯುವುದರ ಮೂಲಕ ಶೈಕ್ಷಣಿಕವಾಗಿ ಯಶಸ್ಸನ್ನು ಗಳಿಸಿದೆ. ಕೇಂದ್ರಿಯ ಪಠ್ಯಕ್ರಮ ಆಧಾರಿತ ಶಿಕ್ಷಣದಲ್ಲಿ ಸತತವಾಗಿ ಹದಿನಾಲ್ಕನೆಯ ಬಾರಿಗೆ ಶೇ. ೧೦೦ ಫಲಿತಾಂಶವನ್ನು ದಾಖಲಿಸಿದ ಕುಂದಾಪುರ ತಾಲ್ಲೂಕಿನ ಏಕೈಕ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ತಾಲ್ಲೂಕಿನ ರಾಜ್ಯ, ಸಿಬಿಎಸ್ಸಿ ಮತ್ತು ಐಸಿಎಸ್ಸಿ ಈ ಮೂರು ಪಠ್ಯಕ್ರಮಗಳ ಶಾಲೆಗಳ ಪೈಕಿ ಇಂತಹ ಸಾಧನೆಗೆ ಕೇವಲ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಭಾಜನವಾಗಿದೆ.

Call us

Call us

Call us

ಪ್ರಸ್ತುತ ಬದಲಾಗುತ್ತಿರುವ ಶೈಕ್ಷಣಿಕ ಕಾಲಘಟ್ಟದಲ್ಲಿ ಯಾವುದೇ ರಾಜಿಯಿಲ್ಲದೇ ಮೂಲ ಪರಂಪರೆಯನ್ನು ಉಳಿಸಿಕೊಂಡು ಆಧುನಿಕ ಶಿಕ್ಷಣದಲ್ಲಿ ತನ್ನದೇ ಆದ ಅದ್ವಿತೀಯ ಛಾಪನ್ನು ಮೂಡಿಸಿಕೊಂಡು ಕಳೆದ ಇಪ್ಪತ್ತು ವರ್ಷಗಳಿಂದ ಕರ್ನಾಟಕ ರಾಜ್ಯದ ಅಗ್ರಪಂಕ್ತಿಯ ವಿದ್ಯಾಲಯವಾಗಿ ಬೆಳೆದು ಬಂದಿದೆ. ರಾಜ್ಯದ ಹಾಗೂ ಹೊರರಾಜ್ಯದ ಸುಮಾರು ೧೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿರುವ ಈ ಶಾಲೆಯು ಸತತವಾಗಿ ಹದಿನಾಲ್ಕನೇ ಬಾರಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ೧೦೦% ಫಲಿತಾಂಶವನ್ನು ದಾಖಲಿಸುವುದರ ಮೂಲಕ ತನ್ನ ವೈಶಿಷ್ಟ್ಯತೆಯನ್ನು ಎತ್ತಿ ಹಿಡಿದಿದೆ. ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಣಕ್ಕೆ ಪೂರಕವಾದ ವಾತಾವರಣಕ್ಕೆ ಹೆಗ್ಗುರುತಾಗಿರುವ ಸಂಸ್ಥೆಯು ನುರಿತ ಹಾಗೂ ಸಮರ್ಪಣಾ ಮನೋಭಾವವನ್ನು ಹೊಂದಿರುವ ಶಿಕ್ಷಕರ ದಂಡನ್ನು ಹೊಂದಿರುತ್ತದೆ.
ಈ ಶೈಕ್ಷಣಿಕ ಸಾಲಿನ ಪರೀಕ್ಷೆಗೆ ಹಾಜರಾದ ೧೦೮ ವಿದ್ಯಾರ್ಥಿಗಳಲ್ಲಿ , ೧೦೭ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲೂ, ಒಬ್ಬ ವಿದ್ಯಾರ್ಥಿಯು ಉನ್ನತ ಶ್ರೇಣಿಯಲ್ಲೂ ತೇರ್ಗಡೆಯಾಗಿದ್ದಾರೆ. ಕುಮಾರ್ ಗಗನ್ ಬಿ. ಹೆಗಡೆ ೯೬.೨% ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ, ಕುಮಾರ್ ಶಂತನು ಸರ್ಕಾರ್ ೯೫.೪% ದ್ವಿತೀಯ ಸ್ಥಾನ, ಕುಮಾರ್ ಗಣಾಪತಿ ಜಿ. ಭಟ್ ೯೪.೪% ತೃತೀಯ ಸ್ಥಾನ ಪಡೆದಿರುತ್ತಾರೆ.

Call us

Call us

ಶಾಲೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಕಾರ್ಯದರ್ಶಿಗಳಾದ ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

3 × five =