ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಡಿ.14: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.ssp.karnataka.gov.in/8080/2122, www.backwardclasses.kar.nic.in ಅಥವಾ ತಾಲೂಕು / ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.