ಹಿಂದು ಕಾರ್ಯಕರ್ತ ಹರ್ಷ ಹತ್ಯೆ: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಿಂದು ಧರ್ಮ ಶ್ರೇಷ್ಠ ಧರ್ಮ. ನಮ್ಮ ದೇಶದ ಭವ್ಯ ಪರಂಪರೆ, ಸನಾತನ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದ ಸನ್ನಿವೇಶ ಬಂದಿರುವುದು ಅತ್ಯಂತ ದುರದೃಷ್ಟಕರ. ಜಿಹಾದಿ ಶಕ್ತಿಗಳು ಪ್ರಪಂಚವನ್ನೇ ನಾಶ ಮಾಡುತ್ತಿದ್ದು, ನನ್ನ ದೇಶದಲ್ಲಿ ಕೂಡ ಇವರ ಅಟ್ಟಹಾಸ ಪ್ರಾರಂಭವಾಗಿದ್ದು, ಭಾರತವನ್ನು ಇಸ್ಲಾಮೀಕರಣ ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಇದರ ಒಂದು ಭಾಗವಾಗಿ ಹಿಂದು ಕಾರ್ಯಕರ್ತರ ಕೊಲೆಗಳು ನಡೆಯುತ್ತಿದೆ. ಸರಕಾರ ಇಂತಹ ಸಂಘಟನೆ ಹಾಗೂ ದೇಶ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಉದ್ಯಮಿ ರತ್ನಾಕರ ಶೆಟ್ಟಿ ಬಡಾಮನೆ ಆಗ್ರಹಿಸಿದರು.

Click here

Click Here

Call us

Call us

Visit Now

Call us

Call us

ಗಂಗೊಳ್ಳಿ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಹಿಂದು ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಗಂಗೊಳ್ಳಿ ಪೋಸ್ಟ್ ಆಫೀಸಿನ ಬಳಿ ಸೋಮವಾರ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಹಿಂಜಾವೇ ಮುಖಂಡ ಯಶವಂತ ಗಂಗೊಳ್ಳಿ, ದೇಶವನ್ನು ಇಸ್ಲಾಂ ದೇಶವನ್ನಾಗಿ ಮಾಡುವ ಪ್ರಯತ್ನಗಳು ಆರಂಭವಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಕೆಲವು ಸಂಘಟನೆಗಳು ಇದಕ್ಕೆ ಕುಮ್ಮಕ್ಕು ನೀಡುತ್ತಿದೆ. ಪಿಎಫ್‌ಐ, ಎಸ್‌ಡಿಪಿಐ ನಂತಹ ಸಂಘಟನೆಗಳು ದೇಶದ್ರೋಹಿ ಚಟುವಟಿಕೆಗಳನ್ನು ನಡೆಸುತ್ತಿದ್ದು, ಮತಾಂದ ಜಿಹಾದಿ ಶಕ್ತಿಗಳು ಸಮಾಜ ಒಡೆಯುವ ಕಾರ್ಯದಲ್ಲಿ ನಿರತವಾಗಿವೆ. ರಾಜ್ಯದಲ್ಲಿ ಹಿಂದು ಕಾರ್ಯಕರ್ತರ ಕಗ್ಗೊಲೆಗಳು ನಿರಂತರವಾಗಿ ನಡೆಯುತ್ತಿದ್ದು, ಸರಕಾರ ಕೂಡಲೇ ಈ ಬಗ್ಗೆ ಕಠಿಣ ಕ್ರಮಕೈಗೊಳ್ಳದಿದ್ದಲ್ಲಿ ಮತ್ತಷ್ಟು ಹಿಂದು ಕಾರ್ಯಕರ್ತರ ಕಗ್ಗೊಲೆ ಮೊದಲಾದ ದುಷ್ಕೃತ್ಯಗಳು ನಡೆಯುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಕೊಲೆಯಾದ ಹಿಂದು ಕಾರ್ಯಕರ್ತ ಹರ್ಷ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ದೀಪ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹಿಂಜಾವೇ ಜಿಲ್ಲಾ ಉಪಾಧ್ಯಕ್ಷ ಶಂಕರ ಕೋಟ, ಹಿಂಜಾವೇ ಮುಖಂಡರಾದ ವಾಸುದೇವ ದೇವಾಡಿಗ, ರತ್ನಾಕರ ಗಾಣಿಗ, ನವೀನ್ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ ಗಂಗೊಳ್ಳಿ ಪಿಎಸ್‌ಐ ನಂಜಾ ನಾಯ್ಕ್, ಬೈಂದೂರು ಪಿಎಸ್‌ಐ ಪವನ್ ನಾಯಕ್ ಬಿಗು ಪೊಲೀಸ್ ಬಂದೋಬಸ್ತ್ ಮಾಡಿದ್ದರು.

Call us

Leave a Reply

Your email address will not be published. Required fields are marked *

six + eleven =