ಹಿರಿಯ ಯಕ್ಷಗಾನ ಕಲಾವಿದ ಚಿತ್ತೂರು ನಾರಾಯಣ ದೇವಾಡಿಗ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹಿರಿಯ ಯಕ್ಷಗಾನ ಕಲಾವಿದರಾದ ಚಿತ್ತೂರು ನಾರಾಯಣ ದೇವಾಡಿಗ (70) ಬೈಂದೂರಿನ ಅವರ ಪುತ್ರಿಯ ಮನೆಯಲ್ಲಿ ನಿಧನರಾದರು.

Click here

Click Here

Call us

Call us

Visit Now

Call us

Call us

ಕುಂದಾಪುರ ತಾಲೂಕಿನ ಹಳ್ನಾಡಿನ ದೇವಾಡಿಗರು ತನ್ನ ಹದಿನಾಲ್ಕನೇ ವಯಸ್ಸಿನಲ್ಲಿ ಗೆಜ್ಜೆ ಕಟ್ಟಿ, ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಗುರು ವೀರಭದ್ರ ನಾಯಕ, ನೀಲಾವರ ರಾಮಕೃಷ್ಣಯ್ಯ, ಹಿರಿಯಡ್ಕ ಗೋಪಾಲರಾಯರ ಗರಡಿಯಲ್ಲಿ ಪಳಗಿ ಸ್ತ್ರೀವೇಷಧಾರಿಯಾಗಿ ಮೇಳ ಸೇರಿದ ಅವರು ಕಮಲಶಿಲೆ, ಸಾಲಿಗ್ರಾಮ, ಹಳವಾಡಿ, ಗೋಳಿಗರಡಿ, ಮಾರಣಕಟ್ಟೆ, ಸೌಕೂರು, ಮಡಾಮಕ್ಕಿ, ಪೆರ್ಡೂರು ಹಾಗು ಹಾಲಾಡಿ ಮೇಳಗಳಲ್ಲಿ ಸುದೀರ್ಘ ಐದು ದಶಕಗಳ ಕಲಾಸೇವೆ ಗೈದಿರುತ್ತಾರೆ.

ಕಳೆದೆರಡು ವರ್ಷಗಳಲ್ಲಿ ಅಸೌಖ್ಯದಿಂದಾಗಿ ಮನೆಯಲ್ಲಿದ್ದು ಅದರ ಪೂರ್ವದಲ್ಲಿ ಮಾರಣಕಟ್ಟೆ ಮೇಳದಲ್ಲಿ ಕಲಾಸೇವೆ ಮಾಡಿದ್ದರು. ಅಂಬೆ, ಮೀನಾಕ್ಷಿ, ದ್ರೌಪದಿ, ದಮಯಂತಿ, ಚಿತ್ರಾಂಗದೆ ಮೊದಲಾದ ಪೌರಾಣಿಕ ಸ್ತ್ರೀಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದಾರೆ. ಕೃಷ್ಣ, ಭೀಷ್ಮ, ರಾಮ, ರಾವಣ, ಈಶ್ವರ, ಅರ್ಜುನ ಮೊದಲಾದ ಪುರುಷ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿದ ಇವರ ಕಲಾಸಾಧನೆಗೆ ಹಲವು ಪುರಸ್ಕಾರಗಳು ಅರಸಿ ಬಂದಿವೆ. ನಾಲ್ಕು ವರ್ಷಗಳ ಹಿಂದೆ ಸಂಸ್ಥೆಯು ಶಿರಿಯಾರ ಮಂಜು ನಾಯ್ಕ ನೆನಪಿನಲ್ಲಿ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ.

ಮೃತರು ಪತ್ನಿ, ಈರ್ವರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ .

Leave a Reply

Your email address will not be published. Required fields are marked *

2 × five =