ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನಲ್ಲಿ ಜನತಾ ಗೀತೋತ್ಸವ 2022

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜನತಾ ಗೀತೋತ್ಸವ 2022 ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು.

Call us

Call us

Visit Now

ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗರವರು ಕನ್ನಡ ನಾಡು- ನುಡಿ-ಸಂಸ್ಕ್ರತಿಗೆ ಸಂಬಂಧಿಸಿದ ಗೀತ ಗಾಯನದಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾದದ್ದು ಎನ್ನುತ್ತಾ ಕಾಲೇಜಿನ ವಿದ್ಯಾರ್ಥಿ ಪ್ರತಿಭೆಗಳನ್ನು ಅಭಿನಂದಿಸಿದರು.

Click Here

Click here

Click Here

Call us

Call us

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಗಣೇಶ ಮೊಗವೀರರವರು ವಹಿಸಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಾಗರಾಜ ಪಾಣರರವರು ಜಾನಪದ ಸಂಸ್ಕೃತಿಯ ಕುರಿತು ಮಾತನಾಡುತ್ತಾ ಕಾಂತಾರ ಸಿನಿಮಾದಲ್ಲಿ ತಾವು ಹಾಡಿರುವ ಜಾನಪದ ಹಾಡುಗಳನ್ನು ಹಾಡಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವಾರ ಅವರು ಅರ್ಥಪೂರ್ಣ ಕಾರ್ಯಕ್ರಮಗಳ ಕುರಿತು ಶ್ಲಾಘನೇ ವ್ಯಕ್ತಪಡಿಸಿದರು. ಜನತಾ ಪ್ರೌಢಶಾಲೆಯ ವೃತ್ತಿ ಶಿಕ್ಷಣ ಶಿಕ್ಷಕಿ ಹಾಗೂ ವಿದೂಷಿ ಪ್ರವಿತಾ ಅಶೋಕ್ ಅವರು ಸಂಗೀತದ ಅಭ್ಯಾಸವನ್ನು ರೂಢಿಸಿಕೊಳ್ಳುವಂತ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಕಾಲೇಜಿನ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

ಕಾಲೇಜಿನ ಉಪಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ರವರು ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿಗಳಾದ ಪ್ರಜ್ವಲ್ , ಕೌಶಿಕ್, ವರ್ಣಾ, ಸೃಜನ್ ನಿರೀಕ್ಷಾ,ಐಶ್ವರ್ಯ ಮಾನ್ಯ ಶ್ರೀ, ಇಂಪಾ, ಅನಘಾ, ಕಮಲ್ ಕನ್ನಡ ಗೀತೆಗಳನ್ನು ಹಾಡಿದರು. ಹಾಹಿನ್ನಲೆ ಸಂಗೀತದಲ್ಲಿ ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಹಾಗೂ ತಬಲಾದಲ್ಲಿ ಕೌಶಲ್ ಸಹಕರಿಸಿದರು. ವಿದ್ಯಾರ್ಥಿಗಳಾದ ಕೌಶಿಕ್ ಪ್ರಾರ್ಥಿಸಿ,ಪ್ರಾಂಜಲ ಸ್ವಾಗತಿಸಿ, ವರ್ಷಾ ರವಿಶಂಕರ್, ಭೂಮಿಕಾ ಹಾಗೂ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ರಾಮರಕ್ಷ ವಂದಿಸಿದರು.

Leave a Reply

Your email address will not be published. Required fields are marked *

11 − one =