ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಸಮೀಪ ರಾತ್ರಿ 8:30ರ ಸುಮಾರಿಗೆ ಬೈಕ್ ಹಾಗೂ ಕಂಟೆನರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಕಂಟೆನರ್ ಚಾಲಕ ವಾಹನ ಸಮೇತ ಅಲ್ಲಿಂದ ಪರಾರಿಯಾಗಿದೆ.
ಘಟನೆಯ ವಿವರ:
ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಬೈಕಿನಲ್ಲಿ ಸವಾರೀರ್ವರು ತೆರಳುತ್ತಿದ್ದಾಗ ಕುಂದಾಪುರದ ಕಡೆಗೆ ಸಾಗುತ್ತಿದ್ದ ಕಂಟೇನರ್ ಒಂದು ಹೆಮ್ಮಾಡಿಯ ಜುವೆಲ್ ಪಾರ್ಕ್ ಹೋಟೆಲ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಢಿಕ್ಕಿ ಹೊಡೆದಿತ್ತು. ಢಿಕ್ಕಿಯಾದ ರಭಸಕ್ಕೆ ಬೈಕ್ ಸಂಪೂರ್ಣ ಪುಡಿಯಾಗಿದ್ದು ಓರ್ವ ಸವಾರನ ಕಾಲು ತುಂಡಾಗಿ ಬಿದ್ದಿದೆ. ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇತ್ತ ಢಿಕ್ಕಿ ಹೊಡೆದ ಕಂಟೆನರ್ ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಬೈಕ್ ಸವಾರರು ಎಲ್ಲಿಯವರು, ಎಲ್ಲಿಗೆ ತೆರಳುತ್ತಿದ್ದರು ಎಂಬ ಸ್ವಷ್ಟ ಮಾಹಿತಿ ಲಭ್ಯವಾಗಿಲ್ಲ. ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಕುಂದಾಪುರ ಪೊಲೀಸರು ಸ್ಥಳಕ್ಕಾಗಮಿಸಿ ತನಿಕೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.