ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ- ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ”ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.

Click Here

Call us

Call us

ಪ್ರಕರಣವು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು. ದಿನಾಂಕ: 01-08-2002 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ .10000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

Click here

Click Here

Call us

Visit Now

2020-21 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು,ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಡುಪಿ ಇವರಿಂದ ಪಡೆದು ಭರ್ತಿಮಾಡಿ ಆಗಸ್ಟ್ 31 ರೊಳಗೆ ಸಲ್ಲಿಸತಕ್ಕದ್ದು.ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಣೆಗಳಿಗಾಗಿ ,ಉಪನಿರ್ದೇಶಕರ ಕಛೇರಿ ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಕೊಠಡಿ ಸಂಖ್ಯೆ -204 ,1 ನೇ ಮಹಡಿ, ರಜತಾದ್ರಿ ,ಮಣಿಪಾಲ ದೂರವಾಣಿ -0820-2574978,0820-2574972 ನ್ನು ಸಂಪರ್ಕಿಸಬಹುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

 

Call us

Leave a Reply

Your email address will not be published. Required fields are marked *

two × one =