ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಹೆಚ್ಚಿನ ಕರ್ತವ್ಯ ನಿರ್ವಹಿಸಿ: ಡಾ.ಎಂ.ಟಿ. ರೇಜು

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್ ಪಾಸಿಟಿವ್ ಆಗಿ, ಹೋಂ ಐಸೋಲೇಷನ್ನಲ್ಲಿರುವವರು, ಅನಗತ್ಯವಾಗಿ ಮನೆಯಿಂದ ಹೊರಬಂದು , ಸಾರ್ವಜನಿಕವಾಗಿ ಸ್ಥಳಗಳಲ್ಲಿ ತಿರುಗಾಡಿ, ಆರೋಗ್ಯವಂತರಿಗೆ ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ, ಹೋಂ ಐಸೋಲೇಷನ್ ನಲ್ಲಿರುವವರನ್ನು ಗುರುತಿಸಲು ಸಾಧ್ಯವಾಗುವಂತೆ, ಅವರ ಕೈಗೆ ಸೀಲ್ ಹಾಕುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ. ರೇಜು ಸೂಚನೆ ನೀಡಿದರು.

Call us

Click Here

Click here

Click Here

Call us

Visit Now

Click here

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಆಗಿ , ಹೋಂ ಐಸೋಲೇಶನ್ ನಲ್ಲಿರುವ ವ್ಯಕ್ತಿಗಳು , ಐಸೋಲೇಷನ್ ನಿಯಮಗಳನ್ನು ಉಲ್ಲಂಘಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ತಿರುಗಾಡುತ್ತಿರುವ ಕುರಿತು ದೂರುಗಳು ಬರುತ್ತಿರುವ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಉಸ್ತುವಾರಿ ಕಾರ್ಯದರ್ಶಿಗಳ ಗಮನಕ್ಕ ತಂದರು, ಈ ಕುರಿತಂತೆ ಪ್ರತಿಕ್ರಿಯಿಸಿದ ಡಾ. ಎಂ.ಟಿ.ರೇಜು ಸೋಂಕಿತರ ಕೈಗಳಿಗೆ ಸೀಲ್ ಹಾಕುವ ಮೂಲಕ, ಅವರು ಮನೆಯಿಂದ ಹೊರಬರದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದರು.

ಕೋವಿಡ್ ಪರೀಕ್ಷಾ ವರದಿಯನ್ನು ವಿಳಂಬಕ್ಕೆ ಆಸ್ಪದ ನೀಡದೆ ಕಾಲಮಿತಿಯಿಳಗೆ ವರದಿ ನೀಡಿ, ಗ್ರಾಮೀಣ ಪ್ರದೇಶಗಳಿಂದ ಸಂಗ್ರಹಿಸುವ ಪರೀಕ್ಷಾ ಮಾದರಿಯನ್ನು ಆದಷ್ಟು ಶೀಘ್ರದಲ್ಲಿ ಸಂಗ್ರಹಿಸಿ ಎಂದರು. ಜಿಲ್ಲೆಯ ಆಸ್ಪತ್ರೆಗಳಲ್ಲಿನ ಬೆಡ್ ಸೌಲಭ್ಯದ ಕುರಿತು ರೂಪಿಸಿರುವ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು , ಆಸ್ಪತ್ರೆಗಳಲ್ಲಿ ಆಕ್ಸಿಜಿನ್ ಪೋಲಾಗದಂತೆ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿ, ಜಿಲ್ಲೆಗೆ ಅಗತ್ಯವಿರುವ ಹೆಚ್ಚುವರಿ ಆಕ್ಸಿಜನ್ ಪೂರೈಕೆ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಎಲ್ಲಾ ಹೆಲ್ತ್ಕೇರ್ ವರ್ಕರ್ ಮತ್ತು ಪ್ರಂಟ್ ಲೈನ್ ವರ್ಕರ್ಗಳು , ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಹೆಚ್ಚಿನ ಶ್ರಮವಹಿಸಿ ಕರ್ತವ್ಯ ನಿರ್ವಹಿಸುವಂತೆ ಡಾ.ಎಂ.ಟಿ.ರೇಜು ಹೇಳಿದರು.

Call us

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ.ಪಂ. ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಡಿಹೆಚ್ಓ ಡಾ.ಸುದೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂನ್ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

5 × 2 =