ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.21 ರ ಭಾನುವಾರ 1 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದ್ದು, ನಾಳಿನ ಕೋವಿಡ ವರದಿಯಲ್ಲಿ ಅಪ್ಡೇಡ್ ಆಗಲಿದೆ.
ಕೊವೀಡ್ ಪಾಸಿಟಿವ್ ವ್ಯಕ್ತಿ ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿಯಾಗಿದ್ದು, ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆ ಹಾಗೂ ಪಕ್ಕದ ವೃತ್ತ ನಿರೀಕ್ಷಕರ ಕಛೇರಿಯನ್ನು ಸ್ಯಾನಿಟೈಸ್ ಮಾಡಿ 2-3 ದಿನದ ಮಟ್ಟಿಗೆ ಬಂದ್ ಮಾಡಲಾಗುತ್ತಿದ್ದು, ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತಿದೆ. ಬೈಂದೂರಿನ ಹಳೆ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ತಾತ್ಕಾಲಿಕವಾಗಿ ಕುಂದಾಪುರ ಉಪವಿಭಾಗದ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ.
ಇಂದು 27 ನೆಗೆಟಿವ್:
ಈ ತನಕ ಒಟ್ಟು 13,745ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,082 ನೆಗೆಟಿವ್, 1064 ಪಾಸಿಟಿವ್ ಬಂದಿದ್ದು, 266 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 27 ನೆಗೆಟಿವ್, 1 ಪಾಸಿಟಿವ್ ಬಂದಿದೆ.
97 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಸದ್ಯ ಒಟ್ಟು 1064ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 955 ಮಂದಿ ಬಿಡುಗಡೆಯಾಗಿದ್ದು, 97 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢ – https://kundapraa.com/?p=38799 .