ಉಡುಪಿ ಜಿಲ್ಲೆಯಲ್ಲಿ ಫೇಸ್ ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ರೂ.100 ದಂಡ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಸಂದರ್ಭ ಹಾಗೂ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್‌ಗಳನ್ನು (ಮಖ ಗವಸು) ಧರಿಸುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದಿದ್ದಲ್ಲಿ ದಂಡ ವಿಧಿಸಲಾಗುತ್ತದೆ.

Click Here

Call us

Call us

ಕೋವಿಡ್-19 ಹರಡುವಿಕೆ ತಡೆಗಟ್ಟಲು ಸರಕಾರ ಲಾಕ್‌ಡೌನ್ ಘೋಷಣೆ ಮಾಡಿದ್ದು, ಈ ನಡುವೆ ಜನರಿಗೆ ಕೆಲವು ವಿನಾಯಿತಿಗಳನ್ನು ನೀಡಿದೆ. ಬೆಳಿಗ್ಗೆ 7 ರಿಂದ ಸಂಜೆ 7 ರ ತನಕ ಜನರು ಅಗತ್ಯ ವಸ್ತುಗಳ ಖರೀದಿ ಹಾಗೂ ಈಗಾಗಲೇ ತಿಳಿಸಲಾಗಿರುವ ಕೆಲಸ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುವಾಗ ಸಂದರ್ಭ ಮತ್ತು ಕೆಲಸದ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

Click here

Click Here

Call us

Visit Now

ಮಾಸ್ಕ್ ಧರಿಸದವರಿಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200ಹಾಗೂ ಇತರ ಕಡೆಗಳಲ್ಲಿ ರೂ.100 ದಂಡ ವಿಧಿಸಲು ಪೊಲೀಸ್ ಸಬ್‌ಇಸ್ಪೆಕ್ಟರ್, ಮಹಾನಗರ ಪಾಲಿಕೆಗಳ ಆರೋಗ್ಯ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸರಕಾರದಿಂದ ನಿಯೋಜಿತರಾದ ಇತರ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

Leave a Reply

Your email address will not be published. Required fields are marked *

2 × 3 =