ಜೂನ್.2ರಿಂದ ಕುಂದಾಪುರ & ಬೈಂದೂರು ತಾಲೂಕಿನ 11 ಗ್ರಾಮಗಳು ಸಂಪೂರ್ಣ ಲಾಕ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗದಿರುವ ಹಿನ್ನೆಲೆಯಲ್ಲಿ 50ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳಿರುವ ಗ್ರಾಮಗಳನ್ನು ಜೂನ್ 2 ರಿಂದ 7ರ ತನಕ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳನ್ನು ಗ್ರಾಮದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ.

Call us

Click Here

Click here

Click Here

Call us

Visit Now

Click here

ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸೋಮವಾರ ಆದೇಶ ಹೊರಡಿಸಿದ್ದು ಅದರಂತೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ 11 ಗ್ರಾಮಗಳು, ಹೆಬ್ರಿ ತಾಲೂಕನ ಬೆಳ್ವೆ ಸೇರಿದಂತೆ ಉಡುಪಿ ಜಿಲ್ಲೆಯ ಒಟ್ಟು 33 ಗ್ರಾಮಗಳು ಸಂಪೂರ್ಣ ಲಾಕ್ ಆಗಲಿದೆ.

ಜಿಲ್ಲಾಡಳಿತ ಲಾಕ್ಡೌನ್’ಗೆ ಆದೇಶಿಸಿದರು ಗ್ರಾಮಗಳು:
ಶಿರೂರು, ಜಡ್ಕಲ್, ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು, 38 ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್, ಬೆಳ್ವೆ, ಮುದ್ರಾಡಿ, ವರಂಗ

ಕೆಲವು ಗ್ರಾಮಗಳು ಸ್ವಯಂ ಲಾಕ್’ಡೌನ್:
ಕುಂದಾಪುರ ತಾಲೂಕಿನ ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ಮೇ 29ರಿಂದ ಜೂನ್ 07ರ ವರೆಗೆ ಸೆಲ್ಪ್ ಲಾಕ್ಡೌನ್ ಮಾಡಿ ಕೇವಲ ಸೋಮವಾರ ಮತ್ತು ಗುರುವಾರ ಬೆಳಿಗ್ಗೆ 6ರಿಂದ 10ಗಂಟೆ ವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಹಕ್ಲಾಡಿ ಹಾಗೂ ಸಿದ್ದಾಪುರ ಗ್ರಾಮದಲ್ಲಿಯೂ ಕೋವಿಡ್ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ.

Call us

 

Leave a Reply

Your email address will not be published. Required fields are marked *

three × 5 =