ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶನಿವಾರ 1146 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 636, ಕುಂದಾಪುರ, ಬೈಂದೂರು ತಾಲೂಕಿನ 246, ಕಾರ್ಕಳ, ಹೆಬ್ರಿ ತಾಲೂಕಿನ 255 ಮಂದಿಗೆ ಹಾಗೂ ಹೊರ ಜಿಲ್ಲೆಯ 9 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು 1146 ಪ್ರಕರಣಗಳಲ್ಲಿ 235 ಸಿಂಟಮಿಕ್ ಹಾಗೂ 911 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 21 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 1125 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.
ಇಂದು ಉಡುಪಿಯ 75 ವರ್ಷದ ವೃದ್ಧ, 63 ವರ್ಷದ ವೃದ್ಧ, 46 ವರ್ಷದ ಮಹಿಳೆ, 65 ವರ್ಷದ ವೃದ್ಧ, 35 ವರ್ಷದ ಮಹಿಳೆ, 35 ವರ್ಷದ ಪುರುಷ, 87 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 1496 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 7262 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2902 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಜಿಲ್ಲೆಯಲ್ಲಿ ಇಂದು 61 ಮಂದಿಗೆ ಮೊದಲನೇ ಡೋಸ್, 6681 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 1,97,136 ಮಂದಿಗೆ ಮೊದಲ ಡೋಸ್ ಹಾಗೂ 67,697 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.
ಇದನ್ನೂ ಓದಿ
► ತೌಕ್ತೇ ಚಂಡಮಾರುತದ ಅಬ್ಬರ: ಹೆಚ್ಚಿದ ಕಡಲ್ಕೋರೆತ, ನದಿ ತೀರದ ಪ್ರದೇಶದಲ್ಲಿ ನೆರೆ – https://kundapraa.com/?p=48195 .
► ಜಿಲ್ಲೆಯಲ್ಲಿ ಕಡಲ್ಕೋರೆತ, ನೆರೆ ಭೀತಿ: ಅಪಾಯದಲ್ಲಿರುವ ಕುಟುಂಬಗಳಿಗೆ ಪುನರ್ವಸತಿ – https://kundapraa.com/?p=48228 .
► ಕಡಲ ಅಲೆಗಳ ರುದ್ರ ನರ್ತನ: ಮನೆ, ದೋಣಿಗೆ ಹಾನಿ. ಬೈಂದೂರು ಶಾಸಕರ ಭೇಟಿ – https://kundapraa.com/?p=48212 .