ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಕ್ರಮವಾಗಿ ಗೋಸಾಗಾಟ ಮಾಡಲಾಗುತ್ತಿದ್ದ ಇನ್ಸುಲೆಟರ್ ಬೆನ್ನತ್ತಿದ ಬೈಂದೂರು ಪೊಲೀಸರು ೧೪ ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.
ನಾವುಂದದಿಂದ ಭಟ್ಕಳ ಕಡೆಗೆ ಇನ್ಸುಲೆಟರ್ ವಾಹನದಲ್ಲಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದಾರೆ ಎಂಬ ಹಿಂದೂಪರ ಸಂಘಟನೆಯ ಮಾಹಿತಿ ಆಧರಿಸಿ ಶಿರೂರು ಟೋಲ್ ಗೇಟಿನಲ್ಲಿ ವಾಹನದ ಮಾಹಿತಿ ಕಲೆಹಾಕಿದ ಬೈಂದೂರು ಪೊಲೀಸರು ಇನ್ಸುಲೆಟರ್ ಬೆನ್ನತ್ತಿ ಭಟ್ಕಳದಲ್ಲಿ ೧೪ ಜಾನುವಾರು ಸಹಿತ ವಾಹನ ವಶಕ್ಕೆ ಪಡೆದಿದ್ದಾರೆ. ಜಲೀಲ್ ಎಂಬಾತ ಈ ಅಕ್ರಮ ಗೋ ಸಾಗಾಟಕ್ಕೆ ಬೈಕ್ ಮೂಲಕ ಎಸ್ಕಾರ್ಟ್ ಮಾಡುತ್ತಿದ್ದ ಎನ್ನಲಾಗಿದೆ.
ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಬೈಂದೂರು ಪಿಎಸ್‌ಐ ಸಂಗೀತಾ, ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.
ಇನ್ನು ಕೊಲ್ಲೂರಿನಲ್ಲಿಯೂ ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯಲಾಗಿದೆ. ಶಾಜು ಎಂಬಾತ ಬೈಕಿನಲ್ಲಿ ಗೋ ಮಾಂಸ ಕೊಂಡೊಯ್ಯುವಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು ಮಾಂಸ ಕಂಡ ಸ್ಥಳಿಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದು ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಬೈಕ್ ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.