ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶನಿವಾರ 182 ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.25ರ ಶನಿವಾರ 182 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 37, ಉಡುಪಿ ತಾಲೂಕಿನ 96 ಹಾಗೂ ಕಾರ್ಕಳ ತಾಲೂಕಿನ 49 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 109 ಪುರುಷರು, 68 ಮಹಿಳೆಯರು, 5 ಮಕ್ಕಳು ಸೇರಿದ್ದಾರೆ. ಇಂದು 79 ಮಂದಿ ಬಿಡುಗಡೆಗೊಂಡಿದ್ದಾರೆ.

493 ನೆಗೆಟಿವ್:
ಈ ತನಕ ಒಟ್ಟು 27,375 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 23,629 ನೆಗೆಟಿವ್, 3,218 ಪಾಸಿಟಿವ್ ಬಂದಿದ್ದು, 528 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 493 ನೆಗೆಟಿವ್, 182 ಪಾಸಿಟಿವ್ ಬಂದಿದೆ. ಒಟ್ಟು 1,611 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

1197 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 3,218 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,008 ಮಂದಿ ಬಿಡುಗಡೆಯಾಗಿದ್ದು, 1,197 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 13 ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

5 × one =