ತ್ರಾಸಿಯಲ್ಲಿ ಬೈಕಿಗೆ ಟ್ಯಾಂಕರ್ ಡಿಕ್ಕಿ: ಬೈಂದೂರಿನ ಈರ್ವರ ದುರ್ಮರಣ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತ್ರಾಸಿ ಬೀಚ್ ಸಮೀಪ ಹೆದ್ದಾರಿ 66ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರಿಗೆ ತೆರಳುತ್ತಿದ್ದ ಬೈಕಿಗೆ ಟ್ಯಾಂಕರ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬೈಂದೂರು ಹೇನ್‌ಬೇರು ನಿವಾಸಿಗಳಾದ ಶಂಕರ ದೇವಾಡಿಗ ಹಾಗೂ ಪ್ರವೀಣ ದೇವಾಡಿಗ ಮೃತ ದುರ್ದೈವಿಗಳು.

Call us

ಟ್ಯಾಂಕರೊಂದು ಬೈಕಿಗೆ ಡಿಕ್ಕಿ ಹೊಡೆದಿದ್ದು, ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದ. ಗಂಭೀರ ಗಾಯಗೊಂಡಿದ್ದು ಓರ್ವ ಬೈಕ್ ಸವಾರ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಅಸುನೀಗಿದ್ದರೆ, ಮತ್ತೋರ್ವ ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು, ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.

ಗಂಗೊಳ್ಳಿಯ ಆಪತ್ಭಾಂಧವ ಇಬ್ರಾಹಿಂ ಗಂಗೊಳ್ಳಿ ಹಾಗೂ ತಂಡ ಅಂಬ್ಯುಲೆನ್ಸ್ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ./

Call us

ಇದನ್ನೂ ಓದಿ:
ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .

 

Leave a Reply

Your email address will not be published. Required fields are marked *

sixteen − one =