ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಮಂಗಳವಾರ 219 ಪಾಸಿಟಿವ್, 1,203 ನೆಗೆಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.10ರ ಮಂಗಳವಾರ 219 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 68, ಉಡುಪಿ ತಾಲೂಕಿನ 115 ಹಾಗೂ ಕಾರ್ಕಳ ತಾಲೂಕಿನ 33 ಮಂದಿಗೆ ಪಾಸಿಟಿವ್ ಬಂದಿದೆ. 3 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ 58 ಸಿಂಥಮೇಟಿವ್ ಹಾಗೂ 161 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 140 ಪುರುಷರು, 79 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇಂದು 112 ಮಂದಿ ಆಸ್ಪತ್ರೆಯಿಂದ ಹಾಗೂ 71 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 48 ವರ್ಷದ ಬೈಂದೂರಿನ ಪುರುಷ, 66 ಹಾಗೂ 41 ವರ್ಷದ ಉಡುಪಿಯ ಪುರುಷರು ಸೇರಿ ನಾಲ್ವರು ವ್ಯಕ್ತಿಗಳು ಇಂದು ಮೃತರಾಗಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 64, ILI 39 ಪ್ರಕರಣ, ಸಾರಿ 2 ಪ್ರಕರಣವಿದ್ದು, 112 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಒಂದು ಪ್ರಕರಣ ಬೇರೆ ರಾಜ್ಯ ಹಾಗೂ ಒಂದು ಪ್ರಕರಣ ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

1,203 ನೆಗೆಟಿವ್:
ಈ ತನಕ ಒಟ್ಟು 47519 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 39399 ನೆಗೆಟಿವ್, 6510 ಪಾಸಿಟಿವ್ ಬಂದಿದ್ದು, 1610 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1203 ನೆಗೆಟಿವ್, 219 ಪಾಸಿಟಿವ್ ಬಂದಿದೆ.

2,672 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 6510 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 3768 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2672 ಸಕ್ರಿಯ ಪ್ರಕರಣಗಳಲ್ಲಿ 1396 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1280 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 70 ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

5 + eight =