ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಗುರುವಾರ 22 ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.9ರ ಗುರುವಾರ 22 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.

ಇಂದು 466 ನೆಗೆಟಿವ್:
ಈ ತನಕ ಒಟ್ಟು 20,711 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 16,835 ನೆಗೆಟಿವ್, 1,443 ಪಾಸಿಟಿವ್ ಬಂದಿದ್ದು, 2,433 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 843 ನೆಗೆಟಿವ್, 22 ಪಾಸಿಟಿವ್ ಬಂದಿದೆ. ಒಟ್ಟು 1235 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

223 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,443 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,217 ಮಂದಿ ಬಿಡುಗಡೆಯಾಗಿದ್ದು, 223 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

 

Leave a Reply

Your email address will not be published. Required fields are marked *

13 + three =