ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಬುಧವಾರ 251 ಪಾಸಿಟಿವ್, 1037 ನೆಗೆಟಿವ್

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.26ರ ಬುಧವಾರ 251 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 81, ಉಡುಪಿ ತಾಲೂಕಿನ 110 ಹಾಗೂ ಕಾರ್ಕಳ ತಾಲೂಕಿನ 84 ಮಂದಿಗೆ ಪಾಸಿಟಿವ್ ಬಂದಿದೆ. 6 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

Call us

ಒಟ್ಟು ಪ್ರಕರಣಗಳಲ್ಲಿ 64 ಸಿಂಥಮೇಟಿವ್ ಹಾಗೂ 187 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 122 ಪುರುಷರು, 129 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 114, ILI 45, ಸಾರಿ 1 ಪ್ರಕರಣವಿದ್ದು, 90 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

Call us

ಇಂದು 99 ಮಂದಿ ಆಸ್ಪತ್ರೆಯಿಂದ ಹಾಗೂ 147 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 49 ವರ್ಷದ ಪುರುಷ ಇಂದು ಮೃತಪಟ್ಟಿದ್ದಾರೆ.

1037 ನೆಗೆಟಿವ್:
ಈ ತನಕ ಒಟ್ಟು 67818 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 56382 ನೆಗೆಟಿವ್, 10704 ಪಾಸಿಟಿವ್ ಬಂದಿದ್ದು, 731 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1037 ನೆಗೆಟಿವ್, 251ಪಾಸಿಟಿವ್ ಬಂದಿದೆ.

2,629 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 10704 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 7983 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2629 ಸಕ್ರಿಯ ಪ್ರಕರಣಗಳಲ್ಲಿ 1059 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1570 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 92 ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

nineteen + 17 =