ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಬುಧವಾರ 263 ಪಾಸಿಟಿವ್, 1179 ನೆಗೆಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.12ರ ಬುಧವಾರ 263 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 95, ಉಡುಪಿ ತಾಲೂಕಿನ 142 ಹಾಗೂ ಕಾರ್ಕಳ ತಾಲೂಕಿನ 23 ಮಂದಿಗೆ ಪಾಸಿಟಿವ್ ಬಂದಿದೆ. 3 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ 51 ಸಿಂಥಮೇಟಿವ್ ಹಾಗೂ 212 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 138 ಪುರುಷರು, 125 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 97, ILI 34 ಪ್ರಕರಣ, ಸಾರಿ 0 ಪ್ರಕರಣವಿದ್ದು, 128 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಒಂದು ಪ್ರಕರಣ ಬೇರೆ ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ಇಂದು 116 ಮಂದಿ ಆಸ್ಪತ್ರೆಯಿಂದ ಹಾಗೂ 82 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ.

1,179 ನೆಗೆಟಿವ್:
ಈ ತನಕ ಒಟ್ಟು 49096 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 40578 ನೆಗೆಟಿವ್, 6773 ಪಾಸಿಟಿವ್ ಬಂದಿದ್ದು, 1745 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1179 ನೆಗೆಟಿವ್, 219 ಪಾಸಿಟಿವ್ ಬಂದಿದೆ.

2,738 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 6773 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 3966 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2738 ಸಕ್ರಿಯ ಪ್ರಕರಣಗಳಲ್ಲಿ 1448 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1290 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 69 ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

1 × two =