ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 27 ಕೊರೋನಾ ಪಾಸಿಟಿವ್

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಒಂದೇ ದಿನ 27 ಕೋರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಎಲ್ಲರೂ ವಿವಿಧ ರಾಜ್ಯಗಳಿಂದ ಆಗಮಿಸಿದ ಹಿನ್ನೆಲೆಯುಳ್ಳವರಾಗಿದ್ದಾರೆ.

Call us

ಮುಂಬೈನಿಂದ ಆಗಮಿಸಿದ 23, ತೆಲಂಗಾಣದ 3, ಕೇರಳದಿಂದ ಚಿಕಿತ್ಸೆಗೆ ಬಂದ ಓರ್ವರಿಗೆ ಪಾಸಿಟಿವ್ ಬಂದಿದೆ. ಈ ಪೈಕಿ 6 ಪುರುಷರು, 5 ಮಹಿಳೆಯರು ಹಾಗೂ 16 ಮಕ್ಕಳು ಸೇರಿದ್ದಾರೆ. ಕೇರಳದಿಂದ ಚಿಕಿತ್ಸೆಗೆ ಬಂದ ಓರ್ವ ವ್ಯಕ್ತಿ ಹೊರತುಪಡಿಸಿ ಉಳಿದವರೆಲ್ಲರೂ ಕ್ವಾರಂಟೈನ್‌ನಲ್ಲಿದ್ದು ಈಗ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Call us

ಜಿಲ್ಲೆಯಲ್ಲಿ ಸದ್ಯ ಒಟ್ಟು 48 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 44 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .

Leave a Reply

Your email address will not be published. Required fields are marked *

eleven + 4 =