ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶುಕ್ರವಾರ 278 ಪಾಸಿಟಿವ್,1314 ನೆಗೆಟಿವ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.21ರ ಶುಕ್ರವಾರ 278 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 99, ಉಡುಪಿ ತಾಲೂಕಿನ 159 ಹಾಗೂ ಕಾರ್ಕಳ ತಾಲೂಕಿನ 14 ಮಂದಿಗೆ ಪಾಸಿಟಿವ್ ಬಂದಿದೆ. 6 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

Click Here

Call us

Call us

ಒಟ್ಟು ಪ್ರಕರಣಗಳಲ್ಲಿ 85 ಸಿಂಥಮೇಟಿವ್ ಹಾಗೂ 193 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 157 ಪುರುಷರು, 121 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 114, ILI 68, ಸಾರಿ 6 ಪ್ರಕರಣವಿದ್ದು, 89 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.
ಇಂದು 204 ಮಂದಿ ಆಸ್ಪತ್ರೆಯಿಂದ ಹಾಗೂ 161 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕುಂದಾಪುರದ 61 ವರ್ಷದ ಪುರುಷ ಹಾಗೂ ಉಡುಪಿಯ 80 ವರ್ಷದ ಪುರುಷ ಇಂದು ಮೃತರಾಗಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ.

Click here

Click Here

Call us

Visit Now

1,314 ನೆಗೆಟಿವ್:
ಈ ತನಕ ಒಟ್ಟು 62767 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 52082 ನೆಗೆಟಿವ್, 9668 ಪಾಸಿಟಿವ್ ಬಂದಿದ್ದು, 1017 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1314 ನೆಗೆಟಿವ್, 278 ಪಾಸಿಟಿವ್ ಬಂದಿದೆ.

2,729 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 9668 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 6857 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2729 ಸಕ್ರಿಯ ಪ್ರಕರಣಗಳಲ್ಲಿ 1130 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1599 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 82 ಮಂದಿ ಮೃತಪಟ್ಟಿದ್ದಾರೆ.

Call us

 

Leave a Reply

Your email address will not be published. Required fields are marked *

11 − 9 =