ಕುಂದಾಪುರ: ಮೂವರು ಬಸ್ ಚಾಲಕರಿಗೆ ಕೋವಿಡ್ ಸೋಂಕು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋದ ಮೂವರು ಬಸ್ ಚಾಲಕರಿಗೆ ಕೋರೋನಾ ಸೊಂಕು ದೃಢಪಟ್ಟಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

44 ವರ್ಷದ ಕುಂದಾಪುರ – ಬೆಂಗಳೂರು ಬಸ್ ಚಾಲಕ, 36 ವರ್ಷದ ಕುಂದಾಪುರ – ಶಿವಮೊಗ್ಗ ಬಸ್ ಚಾಲಕ ಹಾಗೂ 58 ವರ್ಷದ ಬಸ್ ಚಾಲಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಅದರ ವರದಿ ದೊರೆತಿದ್ದು, ಬಾಗಲಕೋಟೆ ಮೂಲದ ಚಾಲಕನನ್ನು ಬಾಗಲಕೋಟೆ ಕೋವಿಡ್ ಆಸ್ಪತ್ರೆಗೆ ಹಾಗೂ ಉಳಿದವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆ ದಾಖಲಿಸಲಾಗಿದ್ದು, ಪ್ರಾಥಮಿಕ ಸಂಪರ್ಕದಲ್ಲಿರುವನ್ನು ಕ್ವಾರಂಟೈನ್ ಮಾಡಲಾಗಿದೆ.

 

Leave a Reply

Your email address will not be published. Required fields are marked *

fourteen + 19 =