ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಬುಧವಾರ 31 ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.8ರ ಬುಧವಾರ 31 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.

ಇಂದು 236 ನೆಗೆಟಿವ್:
ಈ ತನಕ ಒಟ್ಟು 20,493 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,992 ನೆಗೆಟಿವ್, 1,421 ಪಾಸಿಟಿವ್ ಬಂದಿದ್ದು, 3,080 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 236 ನೆಗೆಟಿವ್, 31 ಪಾಸಿಟಿವ್ ಬಂದಿದೆ. ಒಟ್ಟು 1,197 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

229 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,421ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,189 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಉಡುಪಿ ಜಿಲ್ಲೆಯ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ – https://kundapraa.com/?p=39353 .

Leave a Reply

Your email address will not be published. Required fields are marked *

4 × 1 =