ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶುಕ್ರವಾರ 322 ಪಾಸಿಟಿವ್, 2,262 ನೆಗೆಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.14ರ ಶುಕ್ರವಾರ 322 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 95, ಉಡುಪಿ ತಾಲೂಕಿನ 186 ಹಾಗೂ ಕಾರ್ಕಳ ತಾಲೂಕಿನ 36ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ 88 ಸಿಂಥಮೇಟಿವ್ ಹಾಗೂ 234 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 175 ಪುರುಷರು, 147 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 110, ILI 88 ಪ್ರಕರಣ, ಸಾರಿ 4 ಪ್ರಕರಣವಿದ್ದು, 117 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 3 ಪ್ರಕರಣ ಬೇರೆ ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ಇಂದು 333 ಮಂದಿ ಆಸ್ಪತ್ರೆಯಿಂದ ಹಾಗೂ 281 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 86, 48, 48, 55 ವರ್ಷದ ಕುಂದಾಪುರದ ತಾಲೂಕಿನ ನಾಲ್ವರು ಪುರಷರು, 63 ವರ್ಷದ ಉಡುಪಿ ತಾಲೂಕು ಪುರುಷ ಇಂದು ಮೃತಪಟ್ಟಿದ್ದಾರೆ.

2,262 ನೆಗೆಟಿವ್:
ಈ ತನಕ ಒಟ್ಟು 53162 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 44025 ನೆಗೆಟಿವ್, 7497 ಪಾಸಿಟಿವ್ ಬಂದಿದ್ದು, 1640 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 2262 ನೆಗೆಟಿವ್, 322 ಪಾಸಿಟಿವ್ ಬಂದಿದೆ.

2,550 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 7497 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 4872 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2550 ಸಕ್ರಿಯ ಪ್ರಕರಣಗಳಲ್ಲಿ 1301ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1249 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 75 ಮಂದಿ ಮೃತಪಟ್ಟಿದ್ದಾರೆ.

 

Leave a Reply

Your email address will not be published. Required fields are marked *

twenty − ten =