ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶುಕ್ರವಾರ 34 ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.9ರ ಶುಕ್ರವಾರ 34 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.

ಇಂದು 673 ನೆಗೆಟಿವ್:
ಈ ತನಕ ಒಟ್ಟು 21,409 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 17,508 ನೆಗೆಟಿವ್, 1,477 ಪಾಸಿಟಿವ್ ಬಂದಿದ್ದು, 2,424 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 673 ನೆಗೆಟಿವ್, 34 ಪಾಸಿಟಿವ್ ಬಂದಿದೆ. ಒಟ್ಟು 1261 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

250 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,477 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,224 ಮಂದಿ ಬಿಡುಗಡೆಯಾಗಿದ್ದು, 250 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

2 + six =