ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.17ರ ಬುಧವಾರ ಒಟ್ಟು 4 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 3 ಪ್ರಕರಣಗಳು ಮುಂಬೈನಿಂದ ಹಿಂದಿರುಗಿದವರಾಗಿದ್ದು, ಒಂದು ಪ್ರಕರಣ ಈ ಹಿಂದೆ ಮುಂಬೈನಿಂದ ಬಂದಿದ್ದವರ ಪ್ರಾಥಮಿಕ ಸಂಪರ್ಕದಿಂದ ಬಂದಿದೆ.
ಈ ನಡುವೆ ಕೊರೋನಾ ಪಾಸಿಟಿವ್ ಇರುವ ಗರ್ಭಿಣಿ ಮಹಿಳೆಗೆ ಉಡುಪಿ ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲಾಗಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ. ಮಗುವಿಗೆ ಕೊರೋನಾ ಪಾಸಿಟಿವ್ ಬಾರದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 1039 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 908 ಮಂದಿ ಬಿಡುಗಡೆಯಾಗಿದ್ದು, 130 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಉಡುಪಿ: ಕೋವಿಡ್-19 ಸೋಂಕಿತ ಗರ್ಭಿಣಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ವೈದ್ಯರು – https://kundapraa.com/?p=38730 .
► ಜೂನ್ 18ಕ್ಕೆ ದ್ವಿತೀಯ ಪಿಯು ಪರೀಕ್ಷೆ. ಕುಂದಾಪುರ & ಬೈಂದೂರು ತಾಲೂಕು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ – https://kundapraa.com/?p=38720 .