ಕಾರು ಡಿಕ್ಕಿ: ಕುಂದಾಪುರದ ಒಂದೇ ಕುಟುಂಬದ ನಾಲ್ವರು ದುರ್ಮರಣ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಫೆ.21: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಶೌಚಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಉದಯಪುರ ಬಳಿ ನಡೆದಿದೆ. ಮೃತರನ್ನು ಕುಂದಾಪುರ ತಾಲೂಕಿನ ಗುಜ್ಜಾಡಿ ಸಮೀಪದ ನಾಯಕವಾಡಿ ಮೂಲದ ವಿವೇಕ್ ನಾಯಕ್(40), ರೇಷ್ಮಾ ನಾಯಕ್(30) ಮಗಳು ಆವಂತಿನಾಯಕ್(8)ಮತ್ತು ಮಗ ಸೇವಂತ್(6) ಎಂದು ಗುರುತಿಸಲಾಗಿದೆ.

ಬೆಳಗಿನ ಜಾವ 8 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬೆಂಗಳೂರಿನ ಚಿಕ್ಕಬಾಣಾವರದ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಮೃತ ವಿವೇಕ್ ನಾಯಕ್ ಸ್ಪೈಕಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಂಗಳೂರಿನಿಂದ ತಮ್ಮ ಕುಂದಾಪುರಕ್ಕೆ ಹೊರಟಿದ್ದರು. ಬೆಳಗಿನ ಜಾವ 5.30 ಕ್ಕೆ ಬೆಂಗಳೂರಿನಿಂದ ತೆರಳಿದ್ದರು. ಆದರೆ ಮಾರ್ಗಮಧ್ಯೆ ಕಾರು ನಿಯಂತ್ರಣ ಕಳೆದುಕೊಂಡು ಶೌಚಾಲಯಕ್ಕೆ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್.ಪ್ರಕಾಶ್ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷಗೆ ಒಳಪಡಿಸಲಾಗಿದೆ.

Leave a Reply

Your email address will not be published. Required fields are marked *

fourteen + thirteen =