ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಬುಧವಾರ 53 ಪಾಸಿಟಿವ್ ದೃಢ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.15ರ ಬುಧವಾರ 53 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 29, ಉಡುಪಿ ತಾಲೂಕಿನ 18 ಹಾಗೂ ಕಾರ್ಕಳ ತಾಲೂಕಿನ 6 ಮಂದಿಗೆ ಪಾಸಿಟಿವ್ ಬಂದಿದೆ.

Click Here

Call us

Call us

ಒಟ್ಟು ಪ್ರಕರಣಗಳಲ್ಲಿ 24 ಪುರುಷರು, 22 ಮಹಿಳೆಯರು, 7 ಮಕ್ಕಳು ಸೇರಿದ್ದಾರೆ. ಇವರಲ್ಲಿ 2 ಮಂದಿ ಮಂಬೈ ಪ್ರಯಾಣದ ಹಿನ್ನೆಲೆ, 2 ಮಂದಿ ಬೆಂಗಳೂರು ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಪ್ರಾಥಮಿಕ ಸಂಪರ್ಕದಿಂದ 33 ಮಂದಿಗೆ ಹಾಗೂ ILI (influenza-like illness) ಇರುವ 16 ಮಂದಿಗೆ ಪಾಸಿಟಿವ್ ಬಂದಿದೆ. ಇಂದು 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Click here

Click Here

Call us

Visit Now

832 ನೆಗೆಟಿವ್:
ಈ ತನಕ ಒಟ್ಟು 23,108 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 20,667 ನೆಗೆಟಿವ್, 1,786 ಪಾಸಿಟಿವ್ ಬಂದಿದ್ದು, 655 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 832 ನೆಗೆಟಿವ್, 53 ಪಾಸಿಟಿವ್ ಬಂದಿದೆ. ಒಟ್ಟು 1,766 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

401 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,786 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,382 ಮಂದಿ ಬಿಡುಗಡೆಯಾಗಿದ್ದು, 401 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು (2 ದಿನದ ಹಿಂದೆ ಆಸ್ಪತ್ರೆಯಲ್ಲಾದ ಮರಣ ಕೋವಿಡ್ ಪಾಸಿಟವ್ ಇರುವ ಬಗ್ಗೆ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿಲ್ಲ.) ಮೃತಪಟ್ಟಿದ್ದಾರೆ.

Call us

Leave a Reply

Your email address will not be published. Required fields are marked *

6 + 6 =