ಉಡುಪಿ ಜಿಲ್ಲೆಯಲ್ಲಿ ಗುರುವಾರ 568 ಕೋವಿಡ್ ಪಾಸಿಟಿವ್. 2 ಸಾವು, 439 ಮಂದಿ ಗುಣಮುಖ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಗುರುವಾರ 568 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 312, ಕುಂದಾಪುರ, ಬೈಂದೂರು ತಾಲೂಕಿನ 175, ಕಾರ್ಕಳ, ಹೆಬ್ರಿ ತಾಲೂಕಿನ 78 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Call us

ಒಟ್ಟು 568 ಪ್ರಕರಣಗಳಲ್ಲಿ 364 ಸಿಂಟಮಿಕ್ ಹಾಗೂ 204 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 28 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 540 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 2903 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 2359 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 439 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಇಂದು ಕೋವಿಡ್ ಪಾಸಿಟಿವ್ ಆಗಿದ್ದ ಕುಂದಾಪುರದ 76 ವರ್ಷದ ಮಹಿಳೆ ಹಾಗೂ ಕಾರ್ಕಳದ 62 ವರ್ಷದ ಪುರುಷ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

11 − 9 =