ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹವನ್ನು ಅಡ್ಡಗಟ್ಟಿದ ಬೈಂದೂರು ಪೊಲೀಸರು ಆರು ಗೋವುಗಳನ್ನು ರಕ್ಷಣೆ ಮಾಡಿದ್ದು, ವಾಹನ ಹಾಗೂ ಆರೋಪಿ ಶಬ್ಬೀರ್ (35) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯೊಂದಿಗೆ ಕಾರ್ಯಚರಣೆ ನಡೆಸಿದ ಬೈಂದೂರು ಪೊಲೀಸರು, ವಾಹನವನ್ನು ಹಿಂಬಾಲಿಸಿಕೊಂಡು ಹೋಗಿ ತಡೆಗಟ್ಟಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿರುವುದು ದೃಢವಾಗುತ್ತಿದ್ದಂತೆ ಪಿಕಪ್ ವಾಹನ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡರು.
ಕಾರ್ಯಾಚರಣೆಯಲ್ಲಿ ಪಿ.ಎಸ್.ಐ ಪವನ್ ನಾಯಕ್ ಮತ್ತು ಸಿಬ್ಬಂದಿಗಳಾದ ಹೆಡ್ ಕಾನ್ಸಟೆಬಲ್ ಶ್ರೀನಿವಾಸ್ ನಾಯಕ್, ಸುಜಿತ್, ಅಶೋಕ್ ರಾಠೋಡ್ ಭಾಗಿಯಾಗಿದ್ದರು. ವಶಕ್ಕೆ ಪಡೆದ ಆರು ಗೋವುಗಳನ್ನು ಬೈಂದೂರು ಪೋಲಿಸ್ ವಸತಿ ಗೃಹದಲ್ಲಿ ಉಪಚರಿಸಲಾಯಿತು. ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.
