ಯಡಮೊಗೆ ಕೊಲೆ ಪ್ರಕರಣ: ಒಟ್ಟು 6 ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂ.9: ಯಡಮೊಗೆ ಗ್ರಾಮದ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಜೂ.6ರಂದು ನಡೆದ ಕೊಲೆ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಎಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನ್ನು ಅಂದು ಮಧ್ಯರಾತ್ರಿಯೇ ಬಂಧಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಇನ್ನೋರ್ವ ಆರೋಪಿ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಹಾಗೂ ರಾಜೇಶ್ ಭಟ್ ಎಂಬಾತನನ್ನು ಬಂಧಿಸಲಾಗಿದ್ದು ಮೂವರೂ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Call us

Call us

ಜೂ.9ರಂದು ಯಡಮೊಗೆ ನಿವಾಸಿ ಮನೋಜ್ ಕುಮಾರ್, ಯಡಮೊಗೆ ಗ್ರಾಮ ಪಂಚಾಯತ್ ಸದಸ್ಯ ಸದಾಶಿವ ನಾಯ್ಕ್ ಹಾಗೂ ಸ್ಥಳೀಯ ನಿವಾಸಿ ವೇಣುಗೋಪಾಲ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಜೂನ್ 29ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

Click here

Click Here

Call us

Call us

Visit Now

ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ ಎಂದು ಉದಯ ಗಾಣಿಗರ ಪತ್ನಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಈಗ ಪ್ರಕರಣಕ್ಕೆ ತಿರುವು ದೊರಕಿದ್ದು, ಮೊದಲು ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ ಗಾಣಿಗನನ್ನು ಉಪಾಯವಾಗಿ ಕರೆಯಿಸಿ ಸುತ್ತುವರಿದು ಮರದ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆದರೂ ಹೊಡೆತಕ್ಕೆ ಉದಯ ಗಾಣಿಗ ಜಗ್ಗದಿದ್ದಾಗ ಕಾರಿನಲ್ಲಿ ಕುಳಿತಿದ್ದ ಅಪ್ರಾಪ್ತ ಪ್ರಾಯದ ಪ್ರಾಣೇಶ ಯಡಿಯಾಳನ ಪುತ್ರ ಉದಯ ಗಾಣಿಗನ ಮೇಲೆ ಕಾರು ಚಲಾಯಿಸಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕಾರು ಚಲಾಯಿಸಿ ಅಪ್ರಾಪ್ತ ಆರೋಪಿಯನ್ನು ನಾಪತ್ತೆ ಮಾಡಲಾಗಿದ್ದು, ಆತನ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ. ಪ್ರಕರಣದ ಆರೋಪಿಗಳಿಗೆ ರಕ್ಷಣೆ ನೀಡಿದ ಆರೋಪದಲ್ಲಿ ಬಿಜೆಪಿಯ ಜಿಲ್ಲಾ ನಾಯಕ ಸಹಿತ ಇಬ್ಬರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೊಳವೆ ಬಾವಿ ವಿಚಾರದಲ್ಲಿ ಉಂಟಾದ ವೈಮನಸ್ಸು ಹಾಗೂ ಲಾಕ್ಡೌನ್ಗೆ ಸಂಬಂಧಿಸಿದಂತೆ ಉದಯ್ ಅವರು ವಾಟ್ಸ್ಆಪ್ನಲ್ಲಿ ಹಾಕಿದ ಸ್ಟೇಟಸ್ ಕಾರಣವಾಗಿರಿಸಿಕೊಂಡು ಗ್ರಾಮ ಪಂಚಾಯತ್ ಅಧ್ಯಕ್ಷನಿಂದಲೇ ಕೊಲೆಯಾದ ಪ್ರಕರಣ ರಾಜ್ಯಾದ್ಯಂತ ಸುದ್ದಿ ಮಾಡಿದ್ದು, ಗಾಣಿಗ ಸಂಘಟನೆಗಳು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದವು. ಬಿಜೆಪಿ ನಾಯಕರು ನಿಷ್ಪಕ್ಷಪಾತ ತನಿಕೆಗೆ ಮಾಡಲಿ, ಕಾನೂನು ಪ್ರಕ್ರಿಯೆಯಲ್ಲಿ ನಾವು ಮಧ್ಯೆ ಬರುವುದಿಲ್ಲ ಎಂದಿದ್ದರು. ಇದೀಗ ಪ್ರಕರಣದಲ್ಲಿ 6 ಮಂದಿಯ ಬಂಧವಾಗಿದೆ.

Call us

 

Leave a Reply

Your email address will not be published. Required fields are marked *

3 × five =