ಉಡುಪಿ: ಕೋವಿಡ್ ಸೋಂಕಿತ 70 ವರ್ಷದ ವೃದ್ಧ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಾವಣಗೆರೆಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್-19 ಸೋಂಕಿಗೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ದಾವಣಗೆರೆಯ 70 ವರ್ಷದ ವೃದ್ದರೊಬ್ಬರು ಅನಾರೋಗ್ಯ ಕಾರಣದಿಂದ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದರು. ಕೊನೆಗೆ ಚಿಕಿತ್ಸೆ ಫಲಾಕಾರಿಯಾಗದೇ ಶುಕ್ರವಾರ ಸಾವನ್ನಪ್ಪಿದ್ದಾರೆ. ಅವರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಕೋವಿಡ್-19 ಸೋಂಕು ತಗಲಿರುವುದು ದೃಢವಾಗಿತ್ತು. ಕೋವಿಡ್ ನಿಯಮಾವಳಿಯಂತೆ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

 

 

Leave a Reply

Your email address will not be published. Required fields are marked *

four × two =