ಕುಂದಾಪುರ, ಬೈಂದೂರಿನಲ್ಲಿ 71ನೇ ಗಣರಾಜ್ಯೋತ್ಸವ ಸಂಭ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ಆಡಳಿತ, ಕುಂದಾಪುರ ಪುರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ 71ನೇ ಗಣರಾಜ್ಯೋತ್ಸವದ ದ್ವಜಾರೋಹಣವನ್ನು ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು ನೆರವೇರಿಸಿದರು.

Call us

Call us

Visit Now

ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ನಮ್ಮ ದೇಶದಲ್ಲಿ ಮೂರುವರೆ ಸಾವಿರ ಜಾತಿಗಳಿದ್ದರೂ ಎಲ್ಲಾ ಜಾತಿ-ಧರ್ಮಗಳ ಜನರು ಸಮಾನವಾಗಿ ಬದುಕುವ ಹಕ್ಕನ್ನು ಈ ದೇಶದ ಸಂವಿಧಾನ ನೀಡಿದ್ದು, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ನಮ್ಮೊಳಗೆ ಐಕ್ಯತೆ, ಒಗ್ಗಟ್ಟನ್ನು ಬೆಳೆಸಬೇಕು. ನಾವೆಲ್ಲರೂ ತಾಯಿ ಭಾರತಾಂಬೆಯ ಮಕ್ಕಳೆಂಬ ಹೆಮ್ಮೆ ಹೆಚ್ಚಿಸಬೇಕು ಎಂದು ಹೇಳಿದರು.

Click here

Call us

Call us

ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ತಿಪ್ಪೇಸ್ವಾಮಿ, ಎಎಸ್ಪಿ ಹರಿರಾಮ್ ಶಂಕರ್, ಪುರಸಭೆ ಸದಸ್ಯರಾದ ಶ್ರೀಧರ್ ಶೇರುಗಾರ್, ಪ್ರಭಾಕರ ವಿ, ವೃತ್ತ ನಿರೀಕ್ಷಕ ಗೋಪಿಕೃಷ್ಣ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ಅಧಿಕಾರಿ ಕುಸುಮಾಕರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಪುರಸಭೆ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಮಾಜಿ ನಾಮನಿರ್ದೇಶಿತ ಸದಸ್ಯ ಕೇಶವ್ ಭಟ್ ಮೊದಲಾದವರು ಇದ್ದರು.

ಕುಂದಾಪುರ ಎಎಸ್ಪಿ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ, ಪಿಎಸ್‌ಐ ಹರೀಶ್ ಆರ್.ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಎನ್‌ಸಿಸಿ, ನೆವಿ, ಸ್ಕೌಟ್, ಗೈಡ್ಸ್, ಸೇವಾದಳದಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕುಂದಾಪುರ ಸಂತ ಜೋಸೇಫರ ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ಪಥಸಂಚಲನದ ಮೆರುಗನ್ನು ಇನ್ನಷ್ಟು ಹೆಚ್ಚಿಸಿತು. ಕುಂದಾಪುರ ಬೋರ್ಡ್ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಸಮೂಹ ನೃತ್ಯ ಪ್ರದರ್ಶನ ಆಕರ್ಷಣೀಯವಾಗಿ ಮೂಡಿಬಂದಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ‍್ಯಕ್ರಮ ಜರುಗಿದವು. ಸೈಂಟ್ ಮೇರಿ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ನಿರೂಪಿಸಿದರು.


ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವ ಅಗತ್ಯವಿದೆ: ತಹಶೀಲ್ದಾರ್ ಬಿ.ಪಿ. ಪೂಜಾರ್

ಬೈಂದೂರು: ತಾಲೂಕು ಆಡಳಿತ ಕಛೇರಿ ಬೈಂದೂರು ಇದರ ವತಿಯಿಂದ ಇಲ್ಲಿನ ಗಾಂಧೀ ಮೈದಾನದಲ್ಲಿ ನಡೆದ 71ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಶೀಲ್ದಾರ ಹಾಗೂ ತಾಲೂಕು ದಂಡಾಧಿಕಾರಿ ಬಿ.ಪಿ. ಪೂಜಾರ್ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ವಿಶ್ವದ ಅತೀ ದೊಡ್ಡ ಪ್ರಜಾತಂತ್ರ ದೇಶವಾದ ಭಾರತದಲ್ಲಿ ನಾನಾ ಧರ್ಮ, ಜಾತಿ, ಮತ, ಭಾಷೆಗಳಿದ್ದು ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಂಡಿದೆ. ಇಲ್ಲಿ ಎಲ್ಲರೂ ಒಂದೇ ಎನ್ನುವ ಭಾವನೆಯಿದೆ. ಇಂದು ದೇಶದಲ್ಲಿ ಒಕ್ಕೂಟ ಪ್ರಜಾಪ್ರಭುತ್ವವನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.

ದೇಶದಲ್ಲಿ ಭಯೋತ್ಪಾದಕ, ನಕ್ಸಲ್, ಗಡಿಯಲ್ಲಿ ನುಸುಳಿಕೆ ಸೇರಿದಂತೆ ಹತ್ತಾರು ಸಮಸ್ಯೆಗಳಿದ್ದರು, ಅದನ್ನು ನಿಗ್ರಹಿಸಲು ನಮ್ಮ ಸೇನೆ ಹಾಗೂ ಪೋಲೀಸ್ ವ್ಯವಸ್ಥೆ ಸಧೃಢವಾಗಿದೆ. ದೇಶದಲ್ಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ಅದನ್ನು ಮುಂದಿನ ಪೀಳಿಗೆಗೆ ದೊರಕುವಂತೆ ಎಚ್ಚರಿಕೆಯ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಯಡ್ತರೆ ಗ್ರಾ.ಪಂ ಅಧ್ಯಕ್ಷೆ ಮೂಕಾಂಬು ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಸದಸ್ಯ ಪುಷ್ಪರಾಜ್ ಶೆಟ್ಟಿ, ಉಪತಹಶೀಲ್ದಾರ ನಂಜೇಗೌಡ, ಕೃಷ್ಣಮೂರ್ತಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭಾರತಿ, ಬಂದೂರು ವೃತ್ತ ನಿರೀಕ್ಷಕ ಸುರೇಶ್ ಜಿ.ನಾಯ್ಕ, ಬಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಶಿಕ್ಷಣ ಇಲಾಖೆಯ ಸಮಾನ್ವಯಾಧಿಕಾರಿ ಅಬ್ದುಲ್ ರವೂಪ್, ಕಂದಾಯ ನಿರೀಕ್ಷಕ ಈ ಕುಮಾರ್‌ನರಸಿಂಹ ಕಾಮತ್, ವಸಂತ ಹೆಗ್ಡೆ, ಸುಬ್ರಹ್ಮಣ್ಯ ಬಿಜೂರು ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಂದೂರು ವೃತ್ತ ನಿರೀಕ್ಷಕ ಸುರೇಶ್ ಜಿ.ನಾಯ್ಕ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಬಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ನಾಗರತ್ನ ವಂದಿಸಿದರು.

Leave a Reply

Your email address will not be published. Required fields are marked *

twelve + 10 =