ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 735 ಕೋವಿಡ್ ಪಾಸಿಟಿವ್, 3 ಸಾವು, 619 ಮಂದಿ ಗುಣಮುಖ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 735 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 277, ಕುಂದಾಪುರ, ಬೈಂದೂರು ತಾಲೂಕಿನ 201, ಕಾರ್ಕಳ, ಹೆಬ್ರಿ ತಾಲೂಕಿನ 252 ಮಂದಿಗೆ ಹಾಗೂ ಹೊರ ಜಿಲ್ಲೆಯ 5 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Call us

ಒಟ್ಟು 735 ಪ್ರಕರಣಗಳಲ್ಲಿ 27 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 708 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

Call us

Call us

ಇಂದು ಉಡುಪಿಯ 62 ವರ್ಷದ ವೃದ್ಧೆ, ಕುಂದಾಪುರದ 69 ವರ್ಷದ ವೃದ್ಧ, 55 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 619 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5205 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3426 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 3025 ಮಂದಿಗೆ ಮೊದಲನೇ ಡೋಸ್, 126 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,47,299 ಮಂದಿಗೆ ಮೊದಲ ಡೋಸ್ ಹಾಗೂ 79,662 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

Leave a Reply

Your email address will not be published. Required fields are marked *

five × 4 =