ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ 43 ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣೆಯಲ್ಲಿ ಶೇ.76.09ರಷ್ಟು ಮತದಾನವಾಗಿದೆ.
ತಾಲೂಕಿನ 266 ಮತಗಟ್ಟೆಗಳಲ್ಲಿ ಬಹುತೇಕ ಮತದಾನ ಶಾಂತಿಯುತವಾಗಿ ನಡೆದಿದೆ. ಅಂಪಾರುವಿನಲ್ಲಿ ಮತಕೇಂದ್ರದ ಹೊರಕ್ಕೆ ಮಾತಿನ ಚಕಮಕಿ ನಡೆದಿತ್ತು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಾಲಾಡಿಯಲ್ಲಿ, ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಬೆಳ್ಳಾಲದಲ್ಲಿ, ಮಾಜಿ ಶಾಸಕರುಗಳಾದ ಅಪ್ಪಣ್ಣ ಹೆಗ್ಡೆ ಬಸ್ರೂರು ಹಾಗೂ ಕೆ. ಗೋಪಾಲ ಪೂಜಾರಿ ಕಟ್’ಬೆಲ್ತೂರಿನಲ್ಲಿ ಮತದಾನ ಮಾಡಿದರು. ಹಿರಿಯ ನಾಗರಿಕರು, ವಿಕಲಚೇತನರು ಹೆಚ್ಚು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದರು.
ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯ ತನಕ ಶೇ.12.41 ಮತದಾನವಾಗಿದ್ದರೇ, 11 ಗಂಟೆಯ ತನಕ ಶೇ30.17, ಮಧ್ಯಾಹ್ನ 1 ಗಂಟೆಯ ತನಕ ಶೇ.49.46 ಹಾಗೂ 3 ಗಂಟೆಯ ಒಟ್ಟು ಶೇ.61.23 ಮತದಾನವಾಗಿದೆ. ಅಂತಿಮವಾಗಿ ಶೇ.76.09 ಮತದಾನವಾಗಿದೆ.
ಮತ ಕೇಂದ್ರಗಳಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆ ಮಾಡಲಾಗಿದ್ದು, ಮತದಾನಕ್ಕೂ ಮುನ್ನ ಸ್ಯಾನಿಟೈಜ್, ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿತ್ತು. ಎಸ್ಪಿ, ಡಿವೈಎಸ್ಪಿ, ಸಿಪಿಐ ನೇತೃತ್ವದಲ್ಲಿ ಮತದಾನ ಕೇಂದ್ರಗಳಲ್ಲಿ ಬಂದೋವಸ್ತ್ ಏರ್ಪಡಿಸಲಾಗಿತ್ತು.
ಇದನ್ನೂ ಓದಿ
► ಗ್ರಾಮ ಪಂಚಾಯತ್ ಚುನಾವಣೆ: ಬೈಂದೂರು ತಾಲೂಕಿನಲ್ಲಿ ಶೇ.71.28 ಮತದಾನ – https://kundapraa.com/?p=43517 .