81ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್ಶಿಪ್ 2021

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ:
ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿ?ನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಸ್ವರಾಜ್ ಮೈದಾನದಲ್ಲಿ ಆರಂಭಗೊಂಡಿರುವ 81ನೇ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್ಶಿಪ್’ಗೆ ಚಾಲನೆ ನೀಡಲಾಯಿತು.

Call us

Click Here

Click here

Click Here

Call us

Visit Now

Click here

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸರಕಾರ ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣ ಗೌಡ, ತಮ್ಮ ಅಧಿಕಾರಾವಧಿಯಲ್ಲಿ ಇಂದು ದೊಡ್ಡ ಪ್ರಮಾಣದ ಕ್ರೀಡಾ ಕಾರ್ಯಕ್ರಮ ಮೊದಲ ಬಾರಿಗೆ ವೀಕ್ಷಿಸುತ್ತಿರುವುದು ಖುಷಿ ತಂದುಕೊಟ್ಟಿದೆ. ಕ್ರೀಡಾ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ಸರ್ಕಾರ, ಮುಂಚೂಣಿಯಲ್ಲಿದೆ. ರಾಜ್ಯಾದ್ಯಂತ 75 ಕ್ರೀಡಾರ್ಥಿಗಳನ್ನು ದತ್ತು ಪಡೆದು ತರಬೇತಿ ನೀಡಿ ಒಲಿಂಪಿಕ್ ಕ್ತೀಡಾಕೂಟಕ್ಕೆ ಸಜ್ಜುಗೊಳಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕ್ರೀಡಾಕೂಟಕ್ಕೆ ರಾಜ್ಯದಿಂದ 5 ಲಕ್ಷ ನೀಡುವುದಾಗಿ ಘೋಷಿಸಿದರು.

ಕಾರ್ಯಕ್ರಮದಲ್ಲಿ ಒಲಿಂಪಿಯನ್ ಎಂ. ಆರ್ ಪೂವಮ್ಮ ಅವರನ್ನು ಸನ್ಮಾನಿಸಲಾಯಿತು. ಮೊದಲ ದಿನದ ಕ್ರೀಡಾಕೂಟದ 10,000ಮೀ ಓಟದ ವಿಜೇತರನ್ನು ಅಭಿನಂದಿಸಲಾಯಿತು.

ಮಂಗಳೂರು ವಿವಿ ಉಪಕುಲಪತಿ ಡಾ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಜಂಟಿ ಕಾರ್ಯದರ್ಶಿ ಡಾ ಬಲ್ಜೀತ್ ಸಿಂಗ್ ಸೋಖನ್ ಧ್ವಜಾರೋಹಣ ನೆರವೇರಿಸಿದರು. ಬಿಜೆಪಿ ರಾಜ್ಯಾಧ್ಯಾಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು, ಕನ್ನಡ ಹಾಗೂ ಸಂಸ್ಕೃತಿ ಇಲಾಖಾ ಸಚಿವ ವಿ ಸುನಿಲ್ ಕುಮಾರ್, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಉಮಾನಾಥ್ ಕೋಟ್ಯಾನ್, ಸಮಾಜ ಕಲ್ಯಾಣ ಇಲಾಖಾ ಮಾಜಿ ಕ್ರೀಡಾ ಸಚಿವ ಅಭಯಚಂದ್ರ ಜೈನ್, ಮಾಜಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ವಿಶೇಷ ಆಹ್ವಾನಿತರಾಗಿ ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಯ ಆಯ್ಕೆ ಸಮಿತಿಯ ಅಧ್ಯಕ್ಷ ಡಾ. ಬಿನು ಜಾರ್ಜ್ ವರ್ಗೀಸ್, ಅದಾನಿ ಗ್ರೂಪ್ಸ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಉದ್ಯಮಿ ರವೀಂದ್ರ ಆಳ್ವ, ಶಶಿಧರ್ ಶೆಟ್ಟಿ, ಎಂಸಿಸಿ ಬ್ಯಾಂಕ್ ಸಿಇಒ ಚಂದ್ರಶೇಖರ್ ಎಂ., ಕಾರ್ಡೊಲೈಟ್ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ, ಉದ್ಯಮಿ ಶ್ರೀಪತಿ ಭಟ್, ಉಪಸ್ಥಿತರಿದ್ದರು.

ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ
5ನೇ ಬಾರಿಗೆ ಆಳ್ವಾಸ್ ಅತಿಥ್ಯದಲ್ಲಿ ಜರಗುತ್ತಿರುವ ಕ್ರೀಡಾಕೂಟದ ಉದ್ಘಾಟನೆಯ ಪ್ರಯುಕ್ತ, ಸಂಜೆ ಸ್ವರಾಜ್ ಮೈದಾನದ ಸಿಂಥೆಟಿಕ್ ಟ್ರಾಕ್ ನಲ್ಲಿ ದೇಶದಾದ್ಯಂತ ವಿವಿಧ 248 ವಿಶ್ವವಿದ್ಯಾನಿಲಯಗಳ ಅಥ್ಲೀಟ್’ಗಳು ಆಕ?ಕ ಪಥಸಂಚಲನ ನೆರವೇರಿಸಿದರು. ಪಥಸಂಚಲನದ ಬಳಿಕ ಅದ್ಧೂರಿಯಾದ ಸಾಂಸ್ಕೃತಿಕ ಮೆರವಣಿಗೆಯಲ್ಲಿ, ರಾಷ್ಟ್ರದ ವಿವಿಧ ಕಲೆ-ಸಂಸ್ಕೃತಿಗಳನ್ನು ಬಿಂಬಿಸುವ 150 ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಿದವು. ಮೆರವಣಿಗೆಯ ಮೆರುಗು ಹೆಚ್ಚಿಸಲು ಸುಡುಮದ್ದಿನ ಪ್ರದರ್ಶನವೂ ವಿಶೇಷವಾಗಿತ್ತು.

Call us

Leave a Reply

Your email address will not be published. Required fields are marked *

fourteen − one =