ಉಡುಪಿ ಜಿಲ್ಲೆಯಲ್ಲಿ ಗುರುವಾರ 812 ಕೋವಿಡ್ ಪಾಸಿಟಿವ್, 5 ಸಾವು, 914 ಮಂದಿ ಗುಣಮುಖ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಗುರುವಾರ 812 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 5 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 383, ಕುಂದಾಪುರ, ಬೈಂದೂರು ತಾಲೂಕಿನ 211, ಕಾರ್ಕಳ, ಹೆಬ್ರಿ ತಾಲೂಕಿನ 206 ಮಂದಿಗೆ ಹಾಗೂ ಹೊರ ಜಿಲ್ಲೆಯ 12 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Call us

ಒಟ್ಟು 812 ಪ್ರಕರಣಗಳಲ್ಲಿ 23 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 789 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿಯ 77 ವರ್ಷದ ವೃದ್ಧ, 67 ವರ್ಷದ ವೃದ್ಧ, 63 ವರ್ಷದ ವೃದ್ಧ, 66 ವರ್ಷದ ವೃದ್ಧೆ, ಕಾರ್ಕಳದ 70 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 914 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6335 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2405 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

Leave a Reply

Your email address will not be published. Required fields are marked *

7 − 7 =