ಉಡುಪಿ ಜಿಲ್ಲೆಯಲ್ಲಿ ಭಾನುವಾರ 909 ಕೋವಿಡ್ ಪಾಸಿಟಿವ್, 4 ಸಾವು, 772 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಭಾನುವಾರ 909 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 486, ಕುಂದಾಪುರ, ಬೈಂದೂರು ತಾಲೂಕಿನ 273, ಕಾರ್ಕಳ, ಹೆಬ್ರಿ ತಾಲೂಕಿನ 148 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 909 ಪ್ರಕರಣಗಳಲ್ಲಿ 20 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 889 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿಯ 65 ವರ್ಷದ ವೃದ್ಧ, 53 ವರ್ಷದ ಪುರುಷ, 53 ವರ್ಷದ ಪುರುಷ, ಕುಂದಾಪುರದ 79 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 772 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5773 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 4018 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

Leave a Reply

Your email address will not be published. Required fields are marked *

15 − eleven =