ಉಡುಪಿ ಜಿಲ್ಲೆಯಲ್ಲಿ ಭಾನುವಾರ 962 ಕೋವಿಡ್ ಪಾಸಿಟಿವ್, 5 ಸಾವು, 543 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಭಾನುವಾರ 962 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 5 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 309, ಕುಂದಾಪುರ, ಬೈಂದೂರು ತಾಲೂಕಿನ 266, ಕಾರ್ಕಳ, ಹೆಬ್ರಿ ತಾಲೂಕಿನ 384 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 962 ಪ್ರಕರಣಗಳಲ್ಲಿ 201 ಸಿಂಟಮಿಕ್ ಹಾಗೂ 761 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 19 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 943 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿಯ 63 ವರ್ಷದ ವೃದ್ಧ, 58 ವರ್ಷದ ಪುರುಷ, 58 ವರ್ಷದ ಪುರುಷ, ಕುಂದಾಪುರದ 66 ವರ್ಷದ ವೃದ್ಧ, 67 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 543 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6372 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2550 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

► ಜಿಲ್ಲಾದ್ಯಂತ ಮೇ.10ರಿಂದ ಜಾರಿಯಾಗಲಿರುವ ಲಾಕ್‌ಡೌನ್ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ಉಡುಪಿ ಜಿಲ್ಲಾಧಿಕಾರಿ  – https://kundapraa.com/?p=48059 .

ಜಿಲ್ಲೆಯಲ್ಲಿ ಇಂದು ಯಾರಿಗೂ ಮೊದಲ ಡೋಸ್ ನೀಡಲಾಗಿಲ್ಲ, 11 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯತನಕ ಒಟ್ಟು 1,94,805 ಮಂದಿಗೆ ಮೊದಲ ಡೋಸ್ ಹಾಗೂ 57,659 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

 

Leave a Reply

Your email address will not be published. Required fields are marked *

2 × 1 =