ಉಡುಪಿ ಜಿಲ್ಲೆಯಲ್ಲಿ ಬುಧವಾರ 973 ಕೋವಿಡ್ ಪಾಸಿಟಿವ್, 5 ಸಾವು, 894 ಮಂದಿ ಗುಣಮುಖ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಬುಧವಾರ 973 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 353, ಕುಂದಾಪುರ, ಬೈಂದೂರು ತಾಲೂಕಿನ 340, ಕಾರ್ಕಳ, ಹೆಬ್ರಿ ತಾಲೂಕಿನ 273 ಮಂದಿಗೆ ಹಾಗೂ ಹೊರ ಜಿಲ್ಲೆಯ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Click here

Click Here

Call us

Call us

Visit Now

Call us

Call us

ಒಟ್ಟು 973 ಪ್ರಕರಣಗಳಲ್ಲಿ 21 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 952 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿಯ 70 ವರ್ಷದ ವೃದ್ಧೆ, 56 ವರ್ಷದ ಪುರಷ, 55 ವರ್ಷದ ಪುರುಷ, ಕುಂದಾಪುರದ ವರ್ಷದ ವೃದ್ಧ, 80 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 894 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5866 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3589 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 5213 ಮಂದಿಗೆ ಮೊದಲನೇ ಡೋಸ್, 89 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,20,307 ಮಂದಿಗೆ ಮೊದಲ ಡೋಸ್ ಹಾಗೂ 74,558 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

Call us

Leave a Reply

Your email address will not be published. Required fields are marked *

5 × 4 =