ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 977 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 383, ಕುಂದಾಪುರ, ಬೈಂದೂರು ತಾಲೂಕಿನ 280, ಕಾರ್ಕಳ, ಹೆಬ್ರಿ ತಾಲೂಕಿನ 310 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು 977 ಪ್ರಕರಣಗಳಲ್ಲಿ 186 ಸಿಂಟಮಿಕ್ ಹಾಗೂ 791 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 29 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 948 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಇಂದು ಉಡುಪಿಯ 85 ವರ್ಷದ ವೃದ್ದ, 87 ವರ್ಷದ ವೃದ್ಧೆ, 72 ವರ್ಷದ ವೃದ್ದ, ಕಾರ್ಕಳದ 81 ವರ್ಷದ ವೃದ್ಧೆ, ಉಡುಪಿಯ 64 ವರ್ಷದ ಮಹಿಳೆ, 60 ವರ್ಷದ ಮಹಿಳೆ ಹಾಗೂ 58 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 783 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5249 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2653 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಜಿಲ್ಲೆಯಲ್ಲಿ ಇಂದು 18 ಮಂದಿಗೆ ಮೊದಲ ಡೋಸ್, 471 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯತನಕ ಒಟ್ಟು 1,94,788 ಮಂದಿಗೆ ಮೊದಲ ಡೋಸ್ ಹಾಗೂ 56,836 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.
► ಮೇ 10 ರಿಂದ 24ರವರೆಗೆ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್: ಸಿಎಂ ಘೋಷಣೆ – https://kundapraa.com/?p=48021 .