ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋವಿಡ್-19ನ ಪಾಸಿಟಿವ್ ಬಂದಿರುವ ಪ್ರಕರಣಗಳಲ್ಲಿ ಶೇ.98 ಮಂದಿಗೆ ರೋಗ ಲಕ್ಷಣಗಳು ಇಲ್ಲ. ರೋಗಿಗೆ ಆಕ್ಸಿಜಿನ್, ವೆಂಟಿಲೇಟರ್, ಐ.ಸಿ.ಯು ಸೇವೆ ನೀಡುವಂತಹ ಗಂಭೀರ ಪ್ರಕರಣ ಕಂಡುಬಂದಿಲ್ಲ ಎಂದು ಉಡುಪಿ ಕೋವಿಡ್ -19 ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಶನಿವಾರ ನಡೆದ ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ.
ಪಾಸಿಟಿವ್ ಬಂದಿರುವ ಎಲ್ಲರೂ ಚಿಕಿತ್ಸೆಗೆ ಶೀಘ್ರದಲ್ಲಿ ಸ್ಪಂದಿಸುತ್ತಿದ್ದು, ಆರೋಗ್ಯವಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಇಂದಿನಿಂದ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಡಿಸ್ಚಾಜ್ ಆಗಲಿದ್ದಾರೆ. ಕೊರೋನಾ ಸೋಂಕಿತ ಚಿಕಿತ್ಸೆಗಾಗಿ ಉಡುಪಿ ಟಿಎಂಎ ಪೈ ಆಸ್ಪತ್ರೆ, ಕುಂದಾಪು ಸರಕಾರಿ ಆಸ್ಪತ್ರೆ, ಕಾರ್ಕಳ ಆಸ್ಪತ್ರೆ, ಎಸ್.ಡಿ.ಎಂ ಕಾಲೇಜು ಮತ್ತು ಕೊಲ್ಲೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.
ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರಗಳಿಂದ ತೆರಳಿದವರಿಂದ ಅವರ ಮನೆಯವರಿಗೆ ಹಾಗೂ ಸಮುದಾಯಕ್ಕೆ ರೋಗ ಹರಡಿಲ್ಲ, ಹೋಂ ಕ್ವಾರಂಟೈನ್ ನಲ್ಲಿರುವವರ ಮನೆಗೆ ಪ್ರತಿದಿನ ಆಶಾ ಕಾರ್ಯಕರ್ತೆಯರು ಭೇಟಿ ನೀಡಿ, ಪರಿಶೀಲಿಸುತ್ತಿದ್ದು, ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೇ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ, ಜಿಲ್ಲೆಯ ಸರ್ಕಾರಿ ಕೋವಿಡ್ ಲ್ಯಾಬ್ 10 ದಿನದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/
ಇದನ್ನೂ ಓದಿ:
► ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ – https://kundapraa.com/?p=38342 .
► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 .