ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣವನ್ನು ಕೋಡಿಯ ಕೌನ್ಸಿಲರ್ ಪ್ರಭಾಕರ್ ಶೇರೆಗಾರ್ ರವರು ನೆರವೇರಿಸಿ, ’ಸ್ವರ್ಧೆಗಳಲ್ಲಿ ಸೋಲು ಗೆಲುವು ಸಹಜ ಗೆಲುವಿಗಾಗಿ ನಿರಂತರ ಶ್ರಮಿಸುವುದೇ ವಿದ್ಯಾರ್ಥಿಗಳ ಗುರಿಯಾಗಬೇಕೆಂದರು’. ಕ್ರೀಡಾಜ್ಯೋತಿಯನ್ನು ಉದ್ಘಾಟಿಸಿದ ಹಾಜಿ ಕೆ. ಮೊಹಿದ್ದೀನ್ ಬ್ಯಾರಿ ಸ್ಮಾರಕ ಅನುದಾನಿತ ಪ್ರೌಢ ಶಾಲೆಯ ಕಾರ್ಯದರ್ಶಿಯಾದಂತಹ ಅಬ್ದುಲ್ಲಾರವರು -’ಕ್ರೀಡೆ ಆಧುನಿಕ ಜಗತ್ತಿನಲ್ಲಿ ಬಹು ಪ್ರಾಮುಖ್ಯತೆಯನ್ನು ಹೊಂದುತ್ತಿದೆ. ಕ್ರೀಡೆಯು ನಮ್ಮ ಜೀವನೋಪಾಯಕ್ಕು ಅಗತ್ಯವಾದಂತೆ ಆರೋಗ್ಯದ ಸುಸ್ಥಿತಿಗೂ ಅತೀ ಮುಖ್ಯವಾಗಿದೆ ಎಂದರು’.
ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ತೌಸಿಫ್ ಪ್ರತಿಜ್ಞಾ ವಿಧಿ ಬೋಧಿಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಸರ್ವರಿಗೂ ಶುಭಕೋರಿದರು. ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಪ್ರೊ. ಚಂದ್ರಶೇಖರ್ ದೋಮ ಪ್ರಾಸ್ತಾವಿಕ ಮಾತನ್ನಾಡಿ ಸರ್ವರನ್ನು ಸ್ವಾಗತಿಸಿದರು. ಡಾ. ಕೃಷ್ಣರಾಜ ಕರಬ ಕಾರ್ಯಕ್ರಮ ನಿರ್ವಹಿಸಿ, ದೈಹಿಕ ಶಿಕ್ಷಕರಾದ ಶ್ರೀ ಇಲಿಯಾಸ್ ವಂದಿಸಿದರು.