Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ರಿಕೆಟ್: 8 ಸ್ಟಾರ್ ಉಪ್ಪುಂದ ತಂಡಕ್ಕೆ ಚಾಲೆಂಜ್ ಟ್ರೋಫಿ

ಗಂಗೊಳ್ಳಿ : ಗಂಗೊಳ್ಳಿಯ ಚಾಲೆಂಜ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ನಡೆದ 30 ಗಜಗಳ ತಾಲೂಕು ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡವು ಪ್ರಥಮ ಸ್ಥಾನ ಗಳಿಸಿ ನಗದು ಮತ್ತು ಚಾಲೆಂಜ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಕೆಸಿಸಿ ದೊಂಬೆ ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಆದಿತ್ಯವಾರ ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಟಪಾಡಿ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪ್ರತಿಷ್ಠಾನದ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ವಹಿಸಿದ್ದರು. ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜಿ.ಟಿ.ಮಂಜುನಾಥ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಇದೇ ಸಂದರ್ಭ ಸಮಾಜ ಸೇವಕ ಲಕ್ಷ್ಮಣ ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಉದ್ಯಮಿ ಸತೀಶ ಕಾನೋಜಿ, ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್‌ನ ಹಿರಿಯ ಸದಸ್ಯ ವಿಜಯ ಖಾರ್ವಿ, ಸಂಘದ ಅಧ್ಯಕ್ಷ ಚಂದ್ರ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಸಲಹೆಗಾರ ನಾಗರಾಜ ಖಾರ್ವಿ ಸ್ವಾಗತಿಸಿದರು. ವಿನಯ ಖಾರ್ವಿ ಸನ್ಮಾನಿತರನ್ನು ಪರಿಚಯಿಸಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುನೀಲ್ ಖಾರ್ವಿ ವಂದಿಸಿದರು.

Exit mobile version