Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ವಲಯ ಮಟ್ಟದ ಓದು-ಬರಹ ಅಭಿವ್ಯಕ್ತಿ ಸಾಮರ್ಥ್ಯ ಸ್ಪರ್ಧೆ

ಬೈಂದೂರು: ಬೈಂದೂರು ವಲಯ ಮಟ್ಟದ ಓದು-ಬರಹ ಅಭಿವ್ಯಕ್ತಿ ಸಾಮರ್ಥ್ಯ ಸ್ಪರ್ಧಾ ಕಾರ್ಯಕ್ರಮ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ ದೇವಾಡಿಗ ಉದ್ಘಾಟಿಸಿ ಮಾತನಾಡಿ, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರಹೊಮ್ಮಿಸಲು ಇದೊಂದು ಮುಖ್ಯ ವೇದಿಕೆಯಾಗಿದೆ, ಗುಣಾತ್ಮಕ ಕಲಿಕೆಯನ್ನು ಪ್ರೋತ್ಸಾಹಿಸಲು, ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿ ಪಡಿಸಲು ಹಾಗೂ ಸ್ಪರ್ಧಾ ಮನೋಭಾವನೆಯನ್ನು ಬೆಳೆಸಲು ಇಂತಹ ಕಾರ್ಯಕ್ರಮ ನೆರವಾಗುವುದು ಎಂದು ಅಭಿಪ್ರಾಯಪಟ್ಟರು.

ಶ್ರೀ ವೆಂಕಟರಮಣ ಎಜ್ಯುಕೇಶನ್ ಟ್ರಸ್ಟ್ ಉಪ್ಪುಂದ ಇದರ ಸ್ಥಾಪಕ ಅಧ್ಯಕ್ಷ ಗಣೇಶ್ ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬೈಂದೂರು ವಲಯ ಶಿಕ್ಷಕ ಸಂಘದ ವಿವಿಧ ಪದಾಧಿಕಾರಿಗಳು, ಸಂಸ್ಥೆಯ ಕಾರ್ಯದರ್ಶಿ ರಾಜಾರಾಮ್ ಭಟ್, ಮಖ್ಯೋಪಾಧ್ಯಾಯ ರವಿದಾಸ್ ಶೆಟ್ಟಿ, ಬಿ.ಆರ್.ಪಿ ಸುಮಲತಾ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಜೊತೆಗೆ ಶಿಶು ಆಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಭಾಗಿತ್ವದೊಂದಿಗೆ ವಿಜ್ಞಾನ ಮಾದರಿ ಪ್ರದರ್ಶನ ಕಾರ್ಯಕ್ರಮ ಕೂಡ ನಡೆಯಿತು. ಸಿ.ಆರ್.ಪಿ ಸುಬ್ರಮಣ್ಯ ಜಿ.ಉಪ್ಪುಂದ ನಿರೂಪಿಸಿದರು. ಬಿ.ಆರ್.ಸಿ ಸಮನ್ವಯ ಅಧಿಕಾರಿ ರಾಮರಾಯ್ ವಂದಿಸಿದರು.

Exit mobile version