Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಪೈನಾಡಿ ರಸ್ತೆ ಉದ್ಘಾಟನೆ. ಬಲಗೋಡು ಕಿಂಡಿ ಅಣೆಕಟ್ಟಿಗೆ ಗುದ್ದಲಿ ಪೂಜೆ

ಬೈಂದೂರು: ಲೋಕೋಪಯೋಗಿ ಇಲಾಖೆಯಿಂದ ಕಾಂಕ್ರೀಟಿಕರಣಗೊಂಡ ಕಾಲ್ತೋಡು ಪೈನಾಡಿ ರಸ್ತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ, ಕಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ದೇವಾಡಿಗ, ಉಪಾಧ್ಯಕ್ಷೆ ವಸಂತಿ, ಸದಸ್ಯರಾದ ಪರಂಜ್ಯೋತಿ ಐತಾಳ್, ಶೇಷು ದೇವಾಡಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಜಯ ಶೆಟ್ಟಿ, ಲೋಕೋಪಯೋಗಿ ಇಂಜಿನೀಯರ್ ಚಂದ್ರಶೇಖರ್, ಗುತ್ತಿಗೆದಾರ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ಬಲಗೋಡು ಕಂಬಳಗದ್ದೆ ಕಿಂಡಿ ಅಣ್ಣೆಕಟ್ಟು ಕಾಮಗಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಗುದ್ದಲಿ ಪೂಜೆ ನೆರವೇರಿಸಿದರು. ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಣ್ಣಪ್ಪ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಜಯ ಶೆಟ್ಟಿ, ಇಂಜಿನೀಯರ್ ಹೆಮಂತ್ ಮೊದಲಾದವರು ಉಪಸ್ಥಿತರಿದ್ದರು.

Byndoor MLA layed stone for Road construction with raju poojary (1)

Exit mobile version