Site icon Kundapra.com ಕುಂದಾಪ್ರ ಡಾಟ್ ಕಾಂ

ಜಿ.ಪಂ ಚುನಾವಣೆ: ಕಾಂಗ್ರೆಸ್ – ಬಿಜೆಪಿ ಮಹಿಳಾ ಸ್ವರ್ಧಾಕಾಂಕ್ಷಿಗಳು ಅದಲು ಬದಲು!

ಸುನಿಲ್ ಹೆಚ್. ಜಿ. ಬೈಂದೂರು.
ಕುಂದಾಪುರ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳ ಪಕ್ಷಾಂತರವೂ ಚುರುಕುಗೊಳ್ಳುತ್ತಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಟಿಕೇಟಿಗಾಗಿ ಈಗಾಗಲೇ ಆಕಾಂಕ್ಷಿಗಳ ತೆರೆಮರೆಯ ಕಸರತ್ತು ನಡೆಯುತ್ತಿದ್ದರೇ, ಯಾರಿಗೆ ಟಿಕೆಟ್ ನೀಡಬಹುದು ಎಂಬ ಲೆಕ್ಕಾಚಾರದಲ್ಲಿ ಪಕ್ಷದ ನಾಯಕರುಗಳು ಮುಳುಗಿದ್ದಾರೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದೇ ಇರುವುದರಿಂದ ಟಿಕೇಟ್ ನೀಡುವುದು ಕೂಡ ಪಕ್ಷಗಳಿಗೆ ಸವಾಲಾಗಿದೆ ಪರಿಣಮಿಸಿದೆ. ಈ ನಡುವೆ ಪಕ್ಷ, ನಾಯಕರುಗಳೊಂದಿಗೆ ಅಸಮಧಾನಗೊಂಡ ಅಭ್ಯರ್ಥಿಗಳ ಪಕ್ಷಾಂತರ, ಪಕ್ಷೇತರವಾಗಿ ಸ್ವರ್ಥಿಸುವುದಕ್ಕೆ ಅಖಾಡ ಸಿದ್ಧಗೊಳ್ಳುತ್ತಿದೆ.

[quote font_size=”15″ bgcolor=”#ffffff” bcolor=”#9eba9c” arrow=”yes” align=”right”]* ಬಿಜೆಪಿ ಪಕ್ಷದಲ್ಲಿ ಇಷ್ಟು ವರ್ಷಗಳ ಕಾಲ ಸಕ್ರೀಯವಾಗಿ ತೊಡಗಿಸಿಕೊಂಡು ತನ್ನಿಂದಾದ ಕೆಲಸವನ್ನು ಮಾಡಿದ್ದೇನೆ. ಆದರೆ ಅಲ್ಲಿನ ಕೆಲವು ನಾಯಕರುಗಳ ಗುಂಪುಗಾರಿಕೆ, ಕೆಲಸ ಮಾಡುವವರಿಗೂ ಅವಕಾಶ ನೀಡದಿರುವುದು ನನಗೆ ಬೇಸರ ತರಿಸಿತ್ತು. ಹಾಗಾಗಿ ರಾಜಿನಾಮೆ ನೀಡಿದ್ದೇನೆ. ಮುಂದಿನ ನಡೆ ಸದ್ಯದಲ್ಲಿಯೇ ತಿಳಿಯಲಿದೆ – ಗೌರಿ ದೇವಾಡಿಗ[/quote]

ಬಿಜೆಪಿ ಪಕ್ಷದ ಚುನಾಯಿತ ಪ್ರತಿನಿಧಿ, ಉಡುಪಿ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಕಳೆದ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷ ಸೇರುವ ಇರಾದೆ ಹೊಂದಿದ್ದು ಗುಟ್ಟಾಗಿ ಉಳಿದಿರಲಿಲ್ಲ. ಅದನ್ನು ಸಾಕ್ಷೀಕರಿಸುವಂತೆ ಗೌರಿ ದೇವಾಡಿಗ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಎಲ್ಲಾ ಹುದ್ದೆಗಳಿಗೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಮುಖಂಡರ ಗುಂಪುಗಾರಿಕೆಯಿಂದ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲು ಹಾಗೂ ಜನಪರವಾಗಿ ಕೆಲಸ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಮ್ಮ ರಾಜನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಗೌರಿ ದೇವಾಡಿಗ ಅನೇಕ ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು, ತಾಪಂ ಮತ್ತು ಜಿಪಂ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು. ಈಗ ರಾಜಿನಾಮೆ ನೀಡಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ಸದ್ಯದಲ್ಲಿಯೇ ಸೇರ್ಪಡೆಗೊಳ್ಳುವುದು ಬಹುತೇಕ ಖಚಿವಾಗಿದ್ದು, ಖಂಬದಕೋಣೆ ಕ್ಷೇತ್ರದ ಟಿಕೇಟ್ ಪಡೆಯಲಿದ್ದಾರೆ ಎನ್ನಲಾಗಿದೆ.

ಇತ್ತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ಬಿಜೂರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ಭಾರಿ ಶಾರದಾ ಬಿಜೂರು ಅವರ ಬದಲಿಗೆ ಅವರ ಮಗಳನ್ನು ಖಂಬದಕೋಣೆ ಕ್ಷೇತ್ರದಿಂದ ಕಣಕ್ಕಿಳಿಸುವ ತಯಾರಿಯಲ್ಲಿದ್ದಾರೆ. ಒಟ್ಟಿನಲ್ಲಿ ಮಹಿಳಾ ಮೀಸಲಾತಿ ಇದ್ದ ಖಂಬದಕೋಣೆ ಕ್ಷೇತ್ರದಲ್ಲಿ ಈ ಭಾರಿ ಮಹಿಳೆಯರ ನಡುವೆ ನೇರ ಜಿದ್ದಾಜಿದ್ದಿ ಏರ್ಪಡಲಿದ್ದು ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದು ಸದ್ಯದ ಕುತೂಹಲ.

Exit mobile version