Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಹೋಲಿಕ್ರಾಸ್ ಚರ್ಚ್: ಸಿಮಿಟ್ರಿ ದ್ವಾರ ಹಾಗೂ ಏಸುಕ್ರಿಸ್ತನ ಗುಡಿ ಉದ್ಘಾಟನೆ

ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿಗೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೋ ಭೇಟಿ ನೀಡಿ ಚರ್ಚ್ ಸಿಮಿಟ್ರಿ ದ್ವಾರ ಹಾಗೂ ಹಾಗೂ ಏಸುವಿನ ಗುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಾಮೂಹಿಕ ಪ್ರಾರ್ಥನೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರತಿ ಧರ್ಮದ ಜನರಲ್ಲೂ ಬಡವರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡುವ ಗುಣ ಬೆಳೆದಾಗ ಮಾನವೀಯ ಮೌಲ್ಯಗಳಿಗೆ ಅರ್ಥ ಬರುತ್ತದೆ ಎಂದರು.

ಚರ್ಚಿನ ರರ್ಸೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಓದಗಿಸುತ್ತಿರುವ ಬೈಂದೂರು ಶಾಸಕ ಗೋಪಾಲ ಪೂಜಾರಿ ಹಾಗೂ ತಾಲೂಕು ಪಂಚಾಯತ್ ಸದದ್ಯ ರಾಜು ಪೂಜಾರಿ ಅವರನ್ನು ಚರ್ಚಿನ ವತಿಯಿಂದ ಸನ್ಮಾನಿಸಲಾಯಿತು. ಬೈಂದೂರು ಧರ್ಮಪ್ರಾಂತದ ಧರ್ಮಗುರು ರೋನಾಲ್ಡ್ ಮಿರಾಂದ, ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಡೆನಿಯಲ್ ನಜ್ರತ್, ಯಡ್ತರೆ ಗ್ರಾ.ಪಂ ಸದಸ್ಯ ಮಾರ್ಟಿನ್ ಎವರೆಸ್ಟ್ ಡಯಾಸ್ ಮೊದಲಾದವರು ಉಪಸ್ಥಿತರಿದ್ದರು.

news byndoor church 1

Exit mobile version