ಬೈಂದೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಜಿಪಂ ಸದಸ್ಯೆ ಗೌರಿ ದೇವಾಡಿಗ ಮತ್ತು ತಾಪಂ ಸದಸ್ಯ ಎಸ್.ರಾಜು ಪೂಜಾರಿ ಜಂಟಿಯಾಗಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಂದ್ರ ಕುಮಾರ್ ಶೆಟ್ಟಿ, ರೋಟರಿ ಅಧ್ಯಕ್ಷ ರಘುರಾಮ ಶೆಟ್ಟಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗಂಗೊಳ್ಳಿ: ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ – 2016ಕ್ಕೆ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯೆ ಪೂರ್ಣಿಮಾ ಎಂ. ಖಾರ್ವಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಪ್ರದೀಪ ಡಿ.ಕೆ., ಕಾರ್ಯದರ್ಶಿ ರಾಘವೇಂದ್ರ ಭಂಡಾರ್‌ಕಾರ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.